Saturday, June 6, 2026
Homeಕರಾವಳಿಉಡುಪಿಹೆಬ್ರಿ: ಈಜಲು ಹೋದ ಮೂವರು ವಿದ್ಯಾರ್ಥಿಗಳು ಹೊಳೆಯಲ್ಲಿ ಮುಳುಗಿ ಸಾವು...!

ಹೆಬ್ರಿ: ಈಜಲು ಹೋದ ಮೂವರು ವಿದ್ಯಾರ್ಥಿಗಳು ಹೊಳೆಯಲ್ಲಿ ಮುಳುಗಿ ಸಾವು…!

- Advertisement -
- Advertisement -

ಹೆಬ್ರಿ: ಹಿರಿಯಡ್ಕ ಸರ್ಕಾರಿ ಪದವಿಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿಗಳು ಈಜಲು ಹೋಗಿ ಹೊಳೆಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಶಿವಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುಳ್ಳು ಗುಡ್ಡೆ ಸಮೀಪದ ಭಟ್ರಾಡಿಯ ಹೊಳೆಯಲ್ಲಿ ಘಟನೆ ನಡೆದಿದೆ.

ಮೃತರನ್ನು ಸುದರ್ಶನ್ (16), ಸೋನಿತ್ (17) ಹಾಗೂ ಕಿರಣ್ (16) ಎಂದು ಗುರುತಿಸಲಾಗಿದೆ. ಸ್ಥಳೀಯರ ಸಹಕಾರದಿಂದ ಮೃತದೇಹವನ್ನು ಹೊಳೆಯಿಂದ ಮೇಲೆ ಎತ್ತಲಾಗಿದೆ.

ಸ್ಥಳಕ್ಕೆ ಹೆಬ್ರಿ ತಹಸೀಲ್ದಾರ್ ಪುರಂದರ, ಕಂದಾಯ ನಿರೀಕ್ಷಕ ಹಿತೇಶ್, ಪಿಎಸ್ಐ ಮಹೇಶ್, ಮುಖಂಡರಾದ ಸುರೇಶ್ ಶೆಟ್ಟಿ ಶಿವಪುರ, ರಮೇಶ್ ಪೂಜಾರಿ ಪರಿಶೀಲನೆ ನಡೆಸಿದರು.

- Advertisement -

Latest News

error: Content is protected !!