Thursday, June 25, 2026
Homeಕರಾವಳಿಮಂಗಳೂರಿನ ಕಾಲೇಜು ಹಾಸ್ಟೆಲ್ ನಿಂದ ಮೂವರು ವಿದ್ಯಾರ್ಥಿನಿಯರು ಎಸ್ಕೇಪ್!

ಮಂಗಳೂರಿನ ಕಾಲೇಜು ಹಾಸ್ಟೆಲ್ ನಿಂದ ಮೂವರು ವಿದ್ಯಾರ್ಥಿನಿಯರು ಎಸ್ಕೇಪ್!

- Advertisement -
- Advertisement -

ಮಂಗಳೂರು: ಪದವಿ ಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿನಿಯರು ಹಾಸ್ಟೆಲ್ ನಿಂದ ತಪ್ಪಿಸಿಕೊಂಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಮಂಗಳೂರಿನ ಏರ್ ಪೋರ್ಟ್ ರಸ್ತೆಯಲ್ಲಿರುವ ವಿಕಾಸ್ ಪದವಿ ಪೂರ್ವ ಕಾಲೇಜಿನಿಂದ ಮೂವರು ವಿದ್ಯಾರ್ಥಿನಿಯರು ಎಸ್ಕೇಪ್ ಆಗಿದ್ದಾರೆ.

ವಿಕಾಸ್ ಪದವಿ ಪೂರ್ವ ಕಾಲೇಜು ಮಾಜಿ ಸಚಿವ ಕೃಷ್ಣ ಪಾಲೇಮಾರ್ ಒಡೆತನಕ್ಕೆ ಸೇರಿದ್ದಾಗಿದ್ದು, ಯಶಸ್ವಿನಿ, ದಕ್ಷತಾ, ಸಿಂಚನ ನಾಪತ್ತೆಯಾದ ವಿದ್ಯಾರ್ಥಿನಿಯರಾಗಿದ್ದಾರೆ.

ಕಾಲೇಜಿನ ಆವರಣದಲ್ಲೇ ಇರುವ ಹಾಸ್ಟೆಲ್ ನಿಂದ‌‌ ಕಿಟಕಿ ಸಲಾಕೆಗಳನ್ನು ಮುರಿದು ಪರಾರಿಯಾಗಿದ್ದಾರೆ.

ಯಶಸ್ವಿನಿ ಮತ್ತು ದಕ್ಷತಾ ಬೆಂಗಳೂರು ನಿವಾಸಿಗಳಾಗಿದ್ದು, ಸಿಂಚನಾ ಚಿತ್ರದುರ್ಗ ಮೂಲದ ವಿದ್ಯಾರ್ಥಿನಿಯಾಗಿದ್ದಾಳೆ.

ಮುಂಜಾನೆ 3 ಗಂಟೆ ವೇಳೆಗೆ ನಾವು ಹೋಗುತ್ತಿದ್ದೇವೆ, ಕ್ಷಮಿಸಿ ಎಂದು ಪತ್ರ ಬರೆದಿಟ್ಟು ವಿದ್ಯಾರ್ಥಿನಿಯರು ತೆರಳಿದ್ದಾರೆ.

ಸ್ಥಳಕ್ಕೆ ಮಂಗಳೂರು ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Latest News

error: Content is protected !!