- Advertisement -
![]()
- Advertisement -
ಉಡುಪಿ : ಸಮೀಕ್ಷೆ ವೇಳೆ ನಿರ್ಲಕ್ಷ್ಯ ವಹಿಸಿದ ಮೂವರು ಶಿಕ್ಷಕರನ್ನು ಅಮಾನತುಗೊಳಿಸಿ ಉಡುಪಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಗಣತಿದಾರರಾಗಿ ಸಹ ಶಿಕ್ಷಕರಾದ ಸುರೇಖಾ, ರತ್ನ , ಪ್ರಭಾ ಬಿ ರವರನ್ನು ನೇಮಕ ಮಾಡಿ ಆದೇಶ ಮಾಡಲಾಗಿತ್ತು. ಆದರೆ ಇವರುಗಳು ನೇಮಕಾತಿ ಆದೇಶವನ್ನು ಸ್ವೀಕರಿಸಿಲ್ಲ. ಜೊತೆಗೆ ಹಲವು ಬಾರಿ ದೂರವಾಣಿ ಮೂಲಕ ಸಂಪರ್ಕಿಸಿದರೂ ನೇಮಕಾತಿ ಆದೇಶ ಪ್ರತಿಯನ್ನು ಸ್ವೀಕರಿಸಲು ನಿರಾಕರಿಸಿದ್ದರು. ಈ ಹಿನ್ನೆಲೆಯಲ್ಲಿ ಈ ಮೂವರು ಶಿಕ್ಷಕಿಯರಿಗೆ ಕಾರಣ ಕೇಳಿ ನೋಟಿಸ್ ನೀಡಲಾಗಿತ್ತು ಆದರೂ ಈವರೆಗೂ ನೋಟಿಸ್ ಗೆ ಉತ್ತರ ನೀಡಿಲ್ಲವಾದ ಕಾರಣ ಸಮೀಕ್ಷೆದಾರರನ್ನು ಅ.4 ರಂದು ಅಮಾನತ್ತಿನಲ್ಲಿರಿಸಿ ಆದೇಶಿಸಲಾಗಿದೆ. ಇದೇ ರೀತಿ ಸಮೀಕ್ಷೆ ಕಾರ್ಯದಲ್ಲಿ ಸಮೀಕ್ಷೆದಾರರು ನಿರ್ಲಕ್ಷ್ಯ ತೋರಿದರೆ ಸೂಕ್ತ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.
- Advertisement -


