Wednesday, June 3, 2026
Homeಕರಾವಳಿಮಂಗಳೂರುಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣದಲ್ಲಿ ಮೂವರನ್ನು ವಶಕ್ಕೆ ಪಡೆದು ಬಂಟ್ವಾಳ ಪೊಲೀಸರಿಂದ ವಿಚಾರಣೆ

ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣದಲ್ಲಿ ಮೂವರನ್ನು ವಶಕ್ಕೆ ಪಡೆದು ಬಂಟ್ವಾಳ ಪೊಲೀಸರಿಂದ ವಿಚಾರಣೆ

- Advertisement -
- Advertisement -

ಬಂಟ್ವಾಳ: ನಿನ್ನೆ ನಡೆದ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಟ್ವಾಳ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸ್ಥಳೀಯರೇ ಆಗಿರುವ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದ್ದು, ಎಫ್ಐಆರ್ ನಲ್ಲಿ ಆರೋಪಿಗಳಾಗಿ ಉಲ್ಲೇಖಿಸಿರುವ ದೀಪಕ್ ಮತ್ತು ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಮಂಗಳೂರು ನಗರ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಇದ್ದು, ಹತ್ಯೆ ಪ್ರಕರಣದ ತನಿಖೆ ಪ್ರಗತಿಯಲ್ಲಿದೆ ಎಂದು ಬಂಟ್ವಾಳದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಆರ್. ಹಿತೇಂದ್ರ ಹೇಳಿದ್ದಾರೆ.

ಐದು ತಂಡಗಳ ಮೂಲಕ ತನಿಖೆ ನಡೆಸಲಾಗುತ್ತಿದ್ದು, ಉಡುಪಿ, ಚಿಕ್ಕಮಗಳೂರು, ಮೈಸೂರು ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಂದ ಹೆಚ್ಚುವರಿ ಪೊಲೀಸ್ ಸಿಬ್ಬಂದಿ ಕರೆಸಲಾಗಿದೆ ಎಂದು ಎಡಿಜಿಪಿ ಹಿತೇಂದ್ರ ಮಾಹಿತಿ ನೀಡಿದ್ದು, ಪ್ರಚೋದನಕಾರಿ ಹೇಳಿಕೆಗಳನ್ನು ಮೇಲೆ ಪ್ರಕರಣ ದಾಖಲಿಸಿ ಕಾನೂನು ಕ್ರಮ ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ.

- Advertisement -

Latest News

error: Content is protected !!