Sunday, May 12, 2024
Homeಕರಾವಳಿವಿಟ್ಲ; ರಾಷ್ಟ್ರಪತಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಲು ವಿಟ್ಲದ ಮೂವರು ಮಹಿಳೆಯರು ಆಯ್ಕೆ

ವಿಟ್ಲ; ರಾಷ್ಟ್ರಪತಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಲು ವಿಟ್ಲದ ಮೂವರು ಮಹಿಳೆಯರು ಆಯ್ಕೆ

spot_img
- Advertisement -
- Advertisement -

ವಿಟ್ಲ; ಇಂದು ರಾಷ್ಟ್ರಪತಿ ಭವನದಲ್ಲಿ ನಡೆಯುವ ಸ್ವ-ಸಹಾಯ ಗುಂಪಿನ ಸದಸ್ಯರೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಲು ವಿಟ್ಲದ ಮೂವರು ಮಹಿಳೆಯರು ಆಯ್ಕೆಯಾಗಿದ್ದಾರೆ.

ಅಳಿಕೆ ಅನುಗ್ರಹ ಒಕ್ಕೂಟದ ವಾರಿಜಾ ಮತ್ತು ಅಮಿತಾ ಹಾಗೂ ಕೊಳ್ನಾಡು ನೇತ್ರಾವತಿ ಸಂಜೀವಿನಿ ಒಕ್ಕೂಟದ ಇಂದ್ರಾವತಿ ರಾಷ್ಟ್ರಪತಿಯೊಂದಿಗೆ ಸಂವಾದಕ್ಕೆ ಆಯ್ಕೆಯಾಗಿ ವಿಟ್ಲಕ್ಕೆ ಕೀರ್ತಿ ತಂದಿದ್ದಾರೆ.

ರಾಷ್ಟ್ರಪತಿಯವರು ಬುಡಕಟ್ಟು ಜನಾಂಗದ ಸ್ವ-ಸಹಾಯ ಗುಂಪಿನ ಸದಸ್ಯರನ್ನು ಭೇಟಿಯಾಗುವ ಸಲುವಾಗಿ ಹೊಸದಿಲ್ಲಿಯ ರಾಷ್ಟ್ರಪತಿ ಭವನದ ಅಮೃತ ಉದ್ಯಾನವನಕ್ಕೆ ದೇಶದ ಎಲ್ಲೆಡೆಯಿಂದ ಬುಡಕಟ್ಟು ಜನಾಂಗದ ಮಹಿಳೆಯರನ್ನು ಆಯ್ಕೆ ಮಾಡಲಾಗಿದ್ದು, ಈ ಪೈಕಿ ಕರ್ನಾಟಕದಿಂದ 30 ಮಹಿಳೆಯರು ಆಯ್ಕೆಯಾಗಿದ್ದಾರೆ. ಇವರಲ್ಲಿ ದ.ಕ. ಜಿಲ್ಲೆಯಿಂದ ಆಯ್ಕೆಯಾಗಿರುವ ಮೂವರು ಕೂಡಾ ಬಂಟ್ವಾಳ ತಾಲೂಕಿನವರು ಅನ್ನೋದು ಹೆಮ್ಮೆಯ ಸಂಗತಿ.ಟ

ಸಂವಾದ ಕಾರ್ಯಕ್ರಮಕ್ಕೆ ಆಯ್ಕೆಯಾಗಿರುವ ಮೂವರಲ್ಲಿ ಒಬ್ಬರಾದ ವಾರಿಜ  ಅಳಿಕೆಯ ಅನುಗ್ರಹ ಸಂಜೀವಿನಿ ಒಕ್ಕೂಟದಲ್ಲಿ ಕಳೆದ ಮೂರು ವರ್ಷಗಳಿಂದ ಎಂಬಿಕೆ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಈ ಒಕ್ಕೂಟದಿಂದ ಸ್ವ ಉದ್ಯೋಗಕ್ಕೆ ಪ್ರೇರಣೆ ಪಡೆದವರು. ಕೃಷಿ ಸಹಿತ ಮಲ್ಲಿಗೆ ಕೃಷಿಯಲ್ಲೂ ತೊಡಗಿಸಿಕೊಂಡಿರುವ ಇವರು ಆಡು ಸಾಕಣೆ, ಕೋಳಿ ಸಾಕಣೆಯಲ್ಲೂ ತೊಡಗಿಸಿಕೊಂಡಿದ್ದಾರೆ.

ಇನ್ನು ಅಮಿತಾ ಕನ್ಯಾನ ಕೆಪಿಎಸ್ ವಿದ್ಯಾಸಂಸ್ಥೆಯಲ್ಲಿ ಅತಿಥಿ ಶಿಕ್ಷಕಿಯಾಗಿದ್ದಾರೆ. ಇವರು ಅಣಬೆ ಕೃಷಿಯಲ್ಲಿ ತೊಡಗಿಸಿಕೊಂಡಿದ್ದಾರೆ. ಇವರ ಕುಟುಂಬವು ಮಲ್ಲಿಗೆ ಕೃಷಿ, ಹೈನುಗಾರಿಕೆಯಲ್ಲೂ ಯಶಸ್ಸು ಸಾಧಿಸಿದೆ,

ಇಂದ್ರಾವತಿ ಕೊಳ್ನಾಡು ನೇತ್ರಾವತಿ ಒಕ್ಕೂಟದಲ್ಲಿ ಕಳೆದ 20 ವರ್ಷಗಳಿಂದ ತೊಡಗಿಸಿಕೊಂಡಿದ್ದಾರೆ. ಇವರು ಹಪ್ಪಳ, ಸಂಡಿಗೆ ತಯಾರಿಸಿ ಮಾರಾಟ ಮಾಡುವ ಜೊತೆಗೆ ಟೈಲರಿಂಗ್ ವೃತ್ತಿಯಲ್ಲೂ ಪರಿಣಿತಿ ಪಡೆದಿದ್ದಾರೆ.

- Advertisement -
spot_img

Latest News

error: Content is protected !!