Monday, April 29, 2024
Homeಕರಾವಳಿಬೆಳ್ತಂಗಡಿ : ಕೋಮು ಗಲಭೆಯಲ್ಲಿ ಭಾಗಿಯಾಗುವ ಸಾಧ್ಯತೆ : ಚಾರ್ಮಾಡಿಯ ಮೂವರು ಯುವಕರು ಬೆಂಗಳೂರಿಗೆ ಗಡಿಪಾರು

ಬೆಳ್ತಂಗಡಿ : ಕೋಮು ಗಲಭೆಯಲ್ಲಿ ಭಾಗಿಯಾಗುವ ಸಾಧ್ಯತೆ : ಚಾರ್ಮಾಡಿಯ ಮೂವರು ಯುವಕರು ಬೆಂಗಳೂರಿಗೆ ಗಡಿಪಾರು

spot_img
- Advertisement -
- Advertisement -

ಬೆಳ್ತಂಗಡಿ : ಚುನಾವಣಾ ಸಂಧರ್ಭದಲ್ಲಿ ಕಾನೂನು ಸುವ್ಯವಸ್ಥೆಗೆ ದಕ್ಕೆ ತರುವ ಹಾಗೂ ಕೋಮು ಗಲಭೆಗಳಲ್ಲಿ ಭಾಗವಹಿಸುವ ಸಾಧ್ಯತೆ ಇರುವ ಕಾರಣ ಮೂವರು ರೌಡಿಶೀಟರ್ ಗಳನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಬೆಂಗಳೂರಿಗೆ  ಧರ್ಮಸ್ಥಳ ಪೊಲೀಸರು ಗಡಿಪಾರು ಮಾಡಿದ್ದಾರೆ.

2023 ರ ಜೂನ್ 17ರಂದು ಉಜಿರೆಯಲ್ಲಿ ಕಾಲೇಜ್ ವಿದ್ಯಾರ್ಥಿಗಳು ಸರಕಾರಿ ಬಸ್ ನ ಬಾಗಿಲಿನಲ್ಲಿ ನೇತಾಡಿಕೊಂಡಿರುವ ವಿಚಾರದಲ್ಲಿ ಬೇರೆ ಬಸ್ ನಲ್ಲಿ ಬನ್ನಿ ಎಂದು ಕಂಡಕ್ಟರ್ ಹೇಳಿರುವ ವಿಚಾರದಲ್ಲಿ  ಚಾರ್ಮಾಡಿ ಚೆಕ್ ಪೋಸ್ಟ್ ಬಳಿ ಕೆ.ಎಸ್.ಆರ್.ಟಿ.ಸಿ ಬಸ್ ಅಡ್ಡಗಟ್ಟಿ ನಿಲ್ಲಿಸಿ ಚಾಲಕ ಮತ್ತು ನಿರ್ವಾಹಕ ಜೊತೆ ಗಲಾಟೆ ಮಾಡಿ ಕರ್ತವ್ಯಕ್ಕೆ ಅಡ್ಡಿಪಡಿಸಿ ಪ್ರಕರಣದಲ್ಲಿ ಭಾಗಿಯಾದ್ದ ಮೂವರು ರೌಡಿಶೀಟರ್ ಆರೋಪಿಗಳಾದ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ನಿವಾಸಿಗಳಾದ ಮಹಮ್ಮದ್ ಮಹರೂಫ್(22), ಮಹಮ್ಮದ್ ಶಬೀಬ್(22), ಮೊಹಮ್ಮದ್ ಮುಬಶೀರ್(22)
ನನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಬೆಂಗಳೂರಿನ ಬೆಳಂದೂರು ಪೊಲೀಸ್ ಠಾಣಾ ವ್ಯಾಪ್ತಿಗೆ ಚುನಾವಣೆ ಮುಗಿಯುವವರೆಗೆ ಗಡಿಪಾರು ಮಾಡಲಾಗಿದೆ.

- Advertisement -
spot_img

Latest News

error: Content is protected !!