Saturday, June 6, 2026
Homeಕರಾವಳಿನರ್ಸ್ ಹಾಗೂ ರೋಗಿಗಳಿಗಿಬ್ಬರಿಗೆ ಕೊರೊನಾ, ತುಂಬೆ ಖಾಸಗಿ ಆಸ್ಪತ್ರೆ ಸೀಲ್ ಡೌನ್

ನರ್ಸ್ ಹಾಗೂ ರೋಗಿಗಳಿಗಿಬ್ಬರಿಗೆ ಕೊರೊನಾ, ತುಂಬೆ ಖಾಸಗಿ ಆಸ್ಪತ್ರೆ ಸೀಲ್ ಡೌನ್

- Advertisement -
- Advertisement -

ಬಂಟ್ವಾಳ :  ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ವಾರಿಯರ್ಸ್ ಗಳಲ್ಲೇ ಹೆಚ್ಚಾಗಿ ಕೊರೊನಾ ಸೋಂಕು ಕಂಡು ಬರುತ್ತಿರೋದು ಆತಂಕ ಮೂಡಿಸಿದೆ. ಈಗಾಗಲೇ ಜಿಲ್ಲೆಯಲ್ಲಿ 10 ಕ್ಕೂ ಹೆಚ್ಚು ವೈದ್ಯರುಗಳು ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ.

ಇದೀಗ ತುಂಬೆಯ ಖಾಸಗಿ ಆಸ್ಪತ್ರೆಯೊಂದನ್ನು ಸೀಲ್ ಡೌನ್ ಮಾಡಲಾಗಿದೆ. ಇಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ನರ್ಸ್ ಒಬ್ಬರಿಗೆ ಹಾಗೇ ಚಿಕಿತ್ಸೆ ಪಡೆಯುತ್ತಿದ್ದ ರೋಗಿಗಳಿಗಿಬ್ಬರಿಗೆ ಕೋವಿಡ್ -19 ದೃಢಪಟ್ಟ ಹಿನ್ನೆಲೆ  ಆಸ್ಪತ್ರೆಯನ್ನು ಸೀಲ್ ಡೌನ್ ಮಾಡಲಾಗಿದೆ. ಇವರೆಲ್ಲರಿಗೂ ಕೆಲವು ದಿನಗಳ ಹಿಂದೆ ಜ್ವರ ಕಾಣಿಸಿಕೊಂಡ ಹಿನ್ನೆಲೆ ಅವರ ಗಂಟಲು ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಈ ವೇಳೆ ಅವರಿಗೆ ಕೊರೊನಾ ಇರೋದು ದೃಢಪಟ್ಟಿದೆ.ಇದೀಗ ಮೂವರನ್ನು ಮಂಗಳೂರಿನ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಾಗೆಯೇ ಆಸ್ಪತ್ರೆಯನ್ನು ಎರಡು ದಿನಗಳವರೆಗೆ ಸೀಲ್ ಡೌನ್ ಮಾಡಲಾಗಿದ್ದು, ತುರ್ತು ಸೇವೆಯನ್ನು ಹೊರಡು ಪಡಿಸಿ ಬಾಕಿ ಎಲ್ಲಾ ಹೊರ, ಹಾಗೂ ಒಳ ರೋಗಿಗಳ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.

- Advertisement -

Latest News

error: Content is protected !!