Sunday, June 7, 2026
Homeಕರಾವಳಿಕುತ್ಲೂರಿನಲ್ಲಿ ಹುಲಿರಾಯ ಪ್ರತ್ಯಕ್ಷ!.. ಗ್ರಾಮದಲ್ಲಿ ಆತಂಕದ ವಾತಾವರಣ

ಕುತ್ಲೂರಿನಲ್ಲಿ ಹುಲಿರಾಯ ಪ್ರತ್ಯಕ್ಷ!.. ಗ್ರಾಮದಲ್ಲಿ ಆತಂಕದ ವಾತಾವರಣ

- Advertisement -
- Advertisement -

ಬೆಳ್ತಂಗಡಿ: ಇಲ್ಲಿನ ಕುತ್ಲೂರು ಗ್ರಾಮದ ಬಜಿಲಪಾದೆ ಎಂಬಲ್ಲಿ ಶನಿವಾರ ರಾತ್ರಿ ಹುಲಿ ಕಾಣಿಸಿಕೊಂಡಿದ್ದು, ಗ್ರಾಮಸ್ಥರಲ್ಲಿ ಆತಂಕ ಮನೆಮಾಡಿದೆ. ಈ ಹಿನ್ನೆಲೆಯಲ್ಲಿ ಮಾಹಿತಿನೀಡಿದ ಪ್ರತ್ಯಕ್ಷದರ್ಶಿ ರವಿ ಪೂಜಾರಿ ಮಾತನಾಡಿ “ವೇಣೂರು– ನಾರಾವಿ ರಸ್ತೆಯಲ್ಲಿ 9.15ರ ಸುಮಾರಿಗೆ ನಾನು ಬೈಕ್‌ನಲ್ಲಿ ಸಾಗುತ್ತಿದ್ದಾಗ ಹುಲಿ ಕಾಣಿಸಿಕೊಂಡಿದೆ. ಸ್ವಲ್ಪ ಹೊತ್ತು ರಸ್ತೆಯಲ್ಲೇ ಇದ್ದ ಹುಲಿ ನಂತರ ಪೊದೆಯೊತ್ತ ಸಾಗಿದೆ” ಎಂದು ತಿಳಿಸಿದ್ದಾರೆ.

ಗ್ರಾಮದಲ್ಲಿ ಕೆಲವು ನಾಯಿಗಳು ನಾಪತ್ತೆಯಾಗುತ್ತಿದ್ದು, ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ. ಅರಣ್ಯ ಇಲಾಖೆಯವರು ತಕ್ಷಣ ಹುಲಿಯನ್ನು ಸೆರೆಹಿಡಿದು ಸ್ಥಳಾಂತರ ಮಾಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

- Advertisement -

Latest News

error: Content is protected !!