Friday, June 5, 2026
Homeಕರಾವಳಿದಕ್ಷಿಣಕನ್ನಡ ಜಿಲ್ಲೆಯ ಗಡಿ ಭಾಗಗಳಲ್ಲಿ ಕಟ್ಟುನಿಟ್ಟಿನ ತಪಾಸಣೆ !

ದಕ್ಷಿಣಕನ್ನಡ ಜಿಲ್ಲೆಯ ಗಡಿ ಭಾಗಗಳಲ್ಲಿ ಕಟ್ಟುನಿಟ್ಟಿನ ತಪಾಸಣೆ !

- Advertisement -
- Advertisement -

ಕೋವಿಡ್ 3 ನೇ ಅಲೆಯ ಆತಂಕದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಗಡಿ ಭಾಗಗಳಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗುತ್ತಿದೆ. ವಾಹನ ಸವಾರರ ಬಿಗಿ ತಪಾಸಣೆ ನಡೆಸಲಾಗುತ್ತಿದೆ. ಕಟ್ಟುನಿಟ್ಟಿನ ಕ್ರಮ ಜಾರಿಗೊಳಿಸಿದ್ದಾರೆ.

ಕೇರಳದಿಂದ ದಕ್ಷಿಣ ಕನ್ನಡ ಜಿಲ್ಲಾ ಪ್ರವೇಶಕ್ಕೆ ಆರ್‌ಟಿಪಿಸಿಆರ್ ನೆಗೆಟಿವ್ ಪ್ರಮಾಣ ಪತ್ರ ಕಡ್ಡಾಯಗೊಳಿಸಲಾಗಿದೆ. ಮೂರು ಪಾಳಿಯಲ್ಲಿ ಅಧಿಕಾರಿ, ಸಿಬ್ಬಂದಿ ಹಾಗೂ ಪೊಲೀಸರನ್ನು ನಿಯೋಜಿಸಲು ಸೂಚಿಸಿದ್ದಾರೆ ಹಾಗೇ ಗಡಿ ಭಾಗಗಳಲ್ಲಿ ಪೊಲೀಸರು, ಆರೋಗ್ಯ ಇಲಾಖೆಯ ಸಿಬ್ಬಂದಿ ಉಪಸ್ಥಿತಿಯಲ್ಲಿ ತಪಾಸಣೆಯನ್ನು ಬಿಗಿಗೊಳಿಸುವಂತೆ ತಿಳಿಸಿದ್ದಾರೆ.

ಗಡಿ ಪ್ರದೇಶದಲ್ಲಿ ದಿನದ 24 ಗಂಟೆಯೂ ಕಟ್ಟುನಿಟ್ಟಿನ ನಿಗಾ ವಹಿಸುವಂತೆ ವೀಡಿಯೋ ಕಾನ್ಫರೆನ್ಸ್‌ನಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಅವರು ದ. ಕ. ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದಾರೆ.

- Advertisement -

Latest News

error: Content is protected !!