Friday, June 5, 2026
Homeಕರಾವಳಿಬಂಟ್ವಾಳ: ಟಿಂಬರ್ ವ್ಯಾಪಾರ ಮಾಡುತ್ತಿದ್ದ ವ್ಯಕ್ತಿ ನೇಣು ಬಿಗಿದುಕೊಂಡು ಆತ್ಮಹತ್ಯೆ

ಬಂಟ್ವಾಳ: ಟಿಂಬರ್ ವ್ಯಾಪಾರ ಮಾಡುತ್ತಿದ್ದ ವ್ಯಕ್ತಿ ನೇಣು ಬಿಗಿದುಕೊಂಡು ಆತ್ಮಹತ್ಯೆ

- Advertisement -
- Advertisement -

ಬಂಟ್ವಾಳ: ಟಿಂಬರ್ ವ್ಯಾಪಾರ ಮಾಡುತ್ತಿದ್ದ ವ್ಯಕ್ತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವ್ಯಕ್ತಿಯೋರ್ವ ಬಿ.ಸಿ. ರೋಡಿನ ಪ್ರತಿಷ್ಠಿತ ಅಪಾರ್ಟ್ ಮೆಂಟ್ ವೊಂದರಲ್ಲಿ ನಡೆದಿದೆ. ‌ಮೂಲತಃ ಸಜೀಪ ಪಡು ಗ್ರಾಮದ ದೋಟ ನಿವಾಸಿ ಭಕ್ತ ಕುಮಾರ್ ಶೆಟ್ಟಿ (64) ಆತ್ಮಹತ್ಯೆಗೆ ಶರಣಾದವರು.

ಅವಿವಾಹಿತರಾಗಿದ್ದ ಅವರು ಭಕ್ತ ಕುಮಾರ್ ಅಪಾರ್ಟ್ ಮೆಂಟ್ ನಲ್ಲಿ ಒಬ್ಬರೇ ವಾಸವಾಗಿದ್ದರು.ಮರದ ವ್ಯಾಪಾರ ಮಾಡುತ್ತಿದ್ದ ಇವರು ಇತ್ತೀಚಿಗೆ ಆರೋಗ್ಯ ಸಮಸ್ಯೆಯಿಂದ ಸ್ವಲ್ಪಮಟ್ಟಿಗೆ ಖಿನ್ನತೆಗೆ ಒಳಗಾಗಿದ್ದರು ಎಂದು ಹೇಳಲಾಗಿದ್ದು, ನಿನ್ನೆ ರಾತ್ರಿ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.ಬಂಟ್ವಾಳ ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Latest News

error: Content is protected !!