Friday, June 5, 2026
Homeಕರಾವಳಿಪುತ್ತೂರು; ತಿಂಗಳಾಡಿಯಲ್ಲಿ ಅಂಗಡಿ ಬಂದ ಯುವತಿಗೆ ಲೈಂಗಿಕ ಕಿರುಕುಳ ಆರೋಪ; ಆರೋಪಿಯನ್ನು ಬಂಧಿಸಿದ ಪೊಲೀಸರು

ಪುತ್ತೂರು; ತಿಂಗಳಾಡಿಯಲ್ಲಿ ಅಂಗಡಿ ಬಂದ ಯುವತಿಗೆ ಲೈಂಗಿಕ ಕಿರುಕುಳ ಆರೋಪ; ಆರೋಪಿಯನ್ನು ಬಂಧಿಸಿದ ಪೊಲೀಸರು

- Advertisement -
- Advertisement -

ಪುತ್ತೂರು; ತಿಂಗಳಾಡಿಯಲ್ಲಿ ಅಂಗಡಿ ಬಂದ ಯುವತಿಗೆ ಲೈಂಗಿಕ ಕಿರುಕುಳ ಆರೋಪದಡಿ ಪೊಲೀಸರು ಆರೋಪಿ ಸರ್ವೆ ಗ್ರಾಮದ ಸೊರಕೆ ನಿವಾಸಿ ಬದ್ರುದ್ದೀನ್ ಎಂಬಾತನನ್ನು ಬಂಧಿಸಿದ್ದಾರೆ.ಆತನ ವಿರುದ್ಧ ಐಪಿಸಿ ಸೆಕ್ಷನ್ 354ರ ಅಡಿ ಪ್ರಕರಣ ದಾಖಲಾಗಿದೆ.

ಇನ್ನು ಆರೋಪಿಯನ್ನು ಇಂದು ಬೆಳಗ್ಗೆಯೊಳಗೆ ಬಂಧಿಸದೇ ಇದ್ದರೆ ಪ್ರತಿಭಟನೆ ನಡೆಸುವುದಾಗಿ ಹಿಂದೂ ಸಂಘಟನೆಗಳು ಎಚ್ಚರಿಕೆ ನೀಡಿದ್ದವು. ಆದರೆ ಇದೀಗ ಆರೋಪಿಯನ್ನು ಬಂಧಿಸಿರೋದರಿಂದ ಬಂದ್ ನಿರ್ಧಾರವನ್ನು ಹಿಂದೂ ಸಂಘಟನೆಗಳು ವಾಪಾಸ್ ಪಡೆದಿವೆ.

ನಿನ್ನೆ ಸಂಜೆ ಸರ್ವೆ ನೇರೋಳ್ತಡ್ಕದ ಯುವತಿಯೊಬ್ಬಳು ತಿಂಗಳಾಡಿಯಲ್ಲಿರುವ ಸೂಪ‌ರ್ ಬಜಾರ್ ಗೆ ದಿನಸಿ ಖರೀದಿಸಲೆಂದು ಬಂದಿದ್ದಳು. ಆಗ ಅಂಗಡಿ ಮಾಲೀಕ ಹಮೀದ್ ಪಟ್ಟೆ ಚಹಾ ಕುಡಿಯಲೆಂದು ಹೊರಗಡೆ ಹೋಗಿದ್ದರು ಎನ್ನಲಾಗಿದೆ. ಇದೇ ಸಮಯವನ್ನು ಸದುಪಯೋಗಪಡಿಸಿಕೊಂಡ ಅಂಗಡಿಯಲ್ಲಿದ್ದ ಸೊರಕೆ ಓಲೆಮುಂಡೋವು ಸಮೀಪದ ಬದ್ರುದ್ದೀನ್ ಯಾನೆ ಬದ್ರು ಎಂಬಾತ ಆಕೆಯ ಮೈಮೇಲೆ ಕೈಹಾಕಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿತ್ತು

ಈ ವೇಳೆ ಯುವತಿ ಬೊಬ್ಬೆ ಹಾಕಿದ್ದು, ಇದರಿಂದ ಅಲ್ಲಿ ಜನ ಸೇರಿದ್ದಾರೆ. ಆಗ ಆರೋಪಿ ಬದ್ರುದ್ದೀನ್ ಅಲ್ಲಿಂದ ಪರಾರಿಯಾಗಿದ್ದಾನೆ. ಘಟನೆ ಸುದ್ದಿಯಾಗುತ್ತಲೇ ಹಿಂದೂ ಸಂಘಟನೆಗಳ ನೇತೃತ್ವದಲ್ಲಿ ನೂರಾರು ಹಿಂದೂ ಯುವಕರು ಸ್ಥಳದಲ್ಲಿ ಜಮಾಯಿಸಿದ್ದು ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಇನ್ನು ರೋಪಿಯನ್ನು ಕೂಡಲೇ ಬಂಧಿಸಬೇಕು ಎಂದು, ನೆರೆದವರು ಪೊಲೀಸರನ್ನು ಆಗ್ರಹಿಸಿದ್ದು ನಾಳೆ ಬೆಳಗ್ಗೆ 8 ಗಂಟೆ ಮೊದಲು ಆರೋಪಿಯನ್ನು ಬಂಧಿಸದೇ ಇದ್ದಲ್ಲಿ ಉಗ್ರ ರೀತಿಯ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದರು. ಆದರೆ ಇದೀಗ ಆರೋಪಿಯನ್ನು ಬಂಧಿಸಲಾಗಿದೆ.

- Advertisement -

Latest News

error: Content is protected !!