- Advertisement -
![]()
- Advertisement -
ನವದೆಹಲಿ: ಸಚಿವ ಸಂಪುಟ ವಿಸ್ತರಣೆ ಸಾಧ್ಯತೆ ಹಿನ್ನೆಲೆಯಲ್ಲಿ ನವದೆಹಲಿಗೆ ತೆರಳಿದ್ದ ತಿಪಟೂರು ಶಾಸಕ ಕೆ. ಷಡಕ್ಷರಿ ಅನಾರೋಗ್ಯಕ್ಕೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕರ್ನಾಟಕ ಭವನದಲ್ಲಿ ವಾಸ್ತವ್ಯ ಹೂಡಿದ್ದ ಶಾಸಕ ಷಡಕ್ಷರಿ ಅವರಿಗೆ ಇದ್ದಕ್ಕಿದ್ದಂತೆಯೇ ಮಾತನಾಡಲು ಸಮಸ್ಯೆ ಎದುರಾಗಿದ್ದು ನವದೆಹಲಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಡಿಸಿಎಂ ಡಾ. ಜಿ. ಪರಮೇಶ್ವರ್ ಮತ್ತು ವಿಧಾನ ಪರಿಷತ್ ಸದಸ್ಯ ರಾಜೇಂದ್ರ ರಾಜಣ್ಣ ಷಡಕ್ಷರಿ ಅವರ ಆರೋಗ್ಯ ವಿಚಾರಿಸಿದ್ದಾರೆ.
- Advertisement -


