Thursday, June 4, 2026
Homeಕರಾವಳಿಟಿಪ್ಪರ್ ಲಾರಿ ಹಾಗೂ ಓಮ್ನಿ ಕಾರು ನಡುವೆ ಭೀಕರ ಅಪಘಾತ: ಕಾರಿನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯ

ಟಿಪ್ಪರ್ ಲಾರಿ ಹಾಗೂ ಓಮ್ನಿ ಕಾರು ನಡುವೆ ಭೀಕರ ಅಪಘಾತ: ಕಾರಿನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯ

- Advertisement -
- Advertisement -

ಉಳ್ಳಾಲ: ಟಿಪ್ಪರ್ ಲಾರಿ ಹಾಗೂ ಓಮ್ನಿ ಕಾರಿನ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಓಮ್ನಿ ಕಾರಿನಲ್ಲಿದ್ದ ಪ್ರಯಾಣಿಕರಿಬ್ಬರು ಗಂಭೀರ ಗಾಯಗೊಂಡ ಘಟನೆ ಕಿನ್ಯಾ ಗ್ರಾಮದ ನಡುಕುಮೇರ್ ಪಡುವಾಳ್ ಫಾಮ್ಸ್ 9ರ ಬಳಿ ನಡೆದಿದೆ.‌

ಗಾಯಗೊಂಡವರನ್ನು ಕೆ.ಸಿ. ನಗರದ ಪೂಮಣ್ಣು ನಿವಾಸಿಗಳಾದ ಇಮ್ರಾನ್ ( 23) ಮತ್ತು ನೂರುದ್ದೀನ್(22) ಎಂದು ಗುರುತಿಸಲಾಗಿದೆ. ಕೇರಳ ನೋಂದಣಿಯ ಟಿಪ್ಪರ್ ಮರಳನ್ನು ಹೊತ್ತುಕೊಂಡು ದೇರಳಕಟ್ಟೆಯ ಕಡೆಗೆ ಸಾಗುತ್ತಿದ್ದ ವೇಳೆ ನಾಟೆಕಲ್ ನಿಂದ ಕೆ.ಸಿ ರೋಡ್ ಕಡೆಗೆ ಹೋಗುತ್ತಿದ್ದ ಓಮ್ನಿ ಕಾರು ಮುಖಾಮುಖಿ ಢಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.

ಅಪಘಾತದಲ್ಲಿ ಓಮ್ನಿ ಚಾಲಕನ ಕಾಲು ಮುರಿತಕ್ಕೊಳಗಾಗಿದ್ದು, ಅಪಘಾತದ ಗಾಯಾಳುಗಳನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಪ್ರದೇಶದಲ್ಲಿ ನಿತ್ಯವೂ ರಾತ್ರಿ ಹಗಲೆನ್ನದೆ ಅಕ್ರಮ ಮರಳು ಸಾಗಾಟ ನಡೆಯುತ್ತಿದ್ದು, ಈ ಬಗ್ಗೆ ಪೊಲೀಸ್ ಇಲಾಖೆ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!