Friday, June 5, 2026
Homeಚಿಕ್ಕಮಗಳೂರುಚಾರ್ಮಾಡಿ ಘಾಟ್ ನಲ್ಲಿ 2 ಸಾವಿರ ಅಡಿ ಪ್ರಪಾತಕ್ಕೆ ಬಿದ್ದ ಟಿಪ್ಪರ್ ಲಾರಿ

ಚಾರ್ಮಾಡಿ ಘಾಟ್ ನಲ್ಲಿ 2 ಸಾವಿರ ಅಡಿ ಪ್ರಪಾತಕ್ಕೆ ಬಿದ್ದ ಟಿಪ್ಪರ್ ಲಾರಿ

- Advertisement -
- Advertisement -

ಚಾರ್ಮಾಡಿ; ಟಿಪ್ಪರ್ ಲಾರಿಯೊಂದು 2 ಸಾವಿರ ಅಡಿ ಪ್ರಪಾತಕ್ಕೆ ಬಿದ್ದ ಘಟನೆ ಚಾರ್ಮಾಡಿ ಘಾಟಿಯಲ್ಲಿ ಸೋಮನ ಕಾಡು ಸಮೀಪ ಶುಕ್ರವಾರ ಮಧ್ಯರಾತ್ರಿ ನಡೆದಿದೆ.


ಮಂಜು ಕವಿದ ಕಾರಣ ರಸ್ತೆ ಕಾಣದೇ ಚಾಲಕನ ನಿಯಂತ್ರಣ ತಪ್ಪಿ ಟಿಪ್ಪರ್ ಲಾರಿ 2000 ಅಡಿ ಪ್ರಪಾತಕ್ಕೆ ಬಿದ್ದಿದೆ. ಘಟನೆಯಲ್ಲಿ ಚಾಲಕ ಅದೃಷ್ಟವಶಾತ್ ಪಾರಾಗಿದ್ದಾನೆ.

 ಮೂಡಿಗೆರೆಯಿಂದ ಚಾರ್ಮಾಡಿಗೆ ಹೋಗುತ್ತಿದ್ದ ವೇಳೆ ಮಂಜು ಕವಿದ ವಾತಾವರಣವಿದ್ದರಿಂದ ದಾರಿ ಕಾಣದೆ ಟಿಪ್ಪರ್‌ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತಡೆಗೋಡೆಗೆ ಗುದ್ದಿ ಪ್ರಪಾತಕ್ಕೆ ಉರುಳಿ ಬಿದ್ದಿದೆ.


ಉರುಳಿ ಬಿದ್ದ ರಭಸಕ್ಕೆ ಟಿಪ್ಪರ್ ಲಾರಿ ಸಂಪೂರ್ಣ ನಜ್ಜುಗುಜ್ಜಾಗಿದೆ ಚಾಲಕನಿಗೆ ಸೊಂಟಕ್ಕೆ ಗಂಭೀರ ಗಾಯಗಳಾಗಿವೆ. ತಕ್ಷಣ ಆಂಬ್ಯುಲೆನ್ಸ್ ಮೂಲಕ ಉಜಿರೆಯ ಧರ್ಮಸ್ಥಳ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

- Advertisement -

Latest News

error: Content is protected !!