Thursday, June 25, 2026
Homeಕರಾವಳಿಮಂಗಳೂರುಪುತ್ತೂರು: ಟಯರ್ ಬದಲಿಸುವ ವೇಳೆ ಟಯರ್ ಸ್ಫೋಟ; ಇಬ್ಬರಿಗೆ ಗಂಭೀರ ಗಾಯ

ಪುತ್ತೂರು: ಟಯರ್ ಬದಲಿಸುವ ವೇಳೆ ಟಯರ್ ಸ್ಫೋಟ; ಇಬ್ಬರಿಗೆ ಗಂಭೀರ ಗಾಯ

- Advertisement -
- Advertisement -

ಪುತ್ತೂರು: ಟಯರ್ ಬದಲಿಸುವ ವೇಳೆ ಟಯರ್ ಸ್ಫೋಟವಾಗಿ ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ಪುತ್ತೂರು ಪರ್ಲಡ್ಕ ಗೋಳಿಕಟ್ಟೆ ಮಸೀದಿ ಬಳಿ ಸೋಮವಾರ ರಾತ್ರಿ ನಡೆದಿದೆ. ಘಟನೆ ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದ್ದು, ಸ್ಫೋಟ ತೀವ್ರತೆ ನೋಡಿದ್ರೆ ಬೆಚ್ಚಿ ಬೀಳುವಂತಿದೆ.

ಘಟನೆಯಲ್ಲಿ ಗಾಯಗೊಂಡವರನ್ನು ಬೆಳ್ತಂಗಡಿ ತಾಲೂಕಿನ ಕರಾಯದ ಜನತಾ ಕಾಲನಿಯ ರಶೀದ್ ಎಂದು ಗುರುತಿಸಲಾಗಿದೆ. ಕಲ್ಲು ಸಾಗಾಟದ ಲಾರಿಯ ಟಯರ್‌ ಪಂಚರ್ ಆದ ಕಾರಣ ಪರ್ಲಡ್ಕ ಗೋಳಿಕಟ್ಟೆ ಮಸೀದಿ ಬಳಿ ನಿಲ್ಲಿಸಲಾಗಿತ್ತು.

ಬಳಿಕ ಟಯರ್ ಪಂಚರ್ ಮಾಡಿಸಿಕೊಂಡು ಆಟೋ ರಿಕ್ಷಾದಲ್ಲಿ ಟಯರ್‌ ತಂದಿದ್ದರು. ಟಯರ್‌ ಬದಲಿಸುವ ವೇಳೆ ಒಮ್ಮೆಲೇ ಟಯರ್‌ ಸ್ಫೋಟವಾಗಿದ್ದು, ಅದರ ರಿಂಗ್ ಹೊರಚಿಮ್ಮಿದೆ. ರಭಸಕ್ಕೆ ಟಯರ್‌ ಸಹಿತ ರಶೀದ್ ಅವರು ತುಸು ದೂರ ಕಾಂಪೌಂಡ್‌ ಗೆ ಎಸೆಯಲ್ಪಟ್ಟಿದ್ದಾರೆ.ಸದ್ಯ ಆಸ್ಪತ್ರೆಯಲ್ಲಿ ರಶೀದ್ ಚಿಕಿತ್ಸೆ ಪಡೆಯುತ್ತಿದ್ದಾರೆ.

- Advertisement -

Latest News

error: Content is protected !!