Tuesday, September 17, 2024
Homeಕರಾವಳಿಉಡುಪಿಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯಲ್ಲಿ ಕರೋನಾ ಖಚಿತಗೊಂಡ ರೋಗಿಗಳಿಗೆ ಚಿಕಿತ್ಸೆ

ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯಲ್ಲಿ ಕರೋನಾ ಖಚಿತಗೊಂಡ ರೋಗಿಗಳಿಗೆ ಚಿಕಿತ್ಸೆ

spot_img
- Advertisement -
- Advertisement -

ಮಣಿಪಾಲ: ಉಡುಪಿ ಜಿಲ್ಲಾಡಳಿತ ಮತ್ತು ಕರ್ನಾಟಕ ಸರ್ಕಾರದ ಬೆಂಬಲದೊಂದಿಗೆ, ಕರೋನಾ ವೈರಸ್ (ಕೋವಿಡ್ – 19) ಖಚಿತಗೊಂಡ ರೋಗಿಗಳಿಗೆ ಚಿಕಿತ್ಸೆ ನೀಡಲು ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯನ್ನು ಸಂಪೂರ್ಣವಾಗಿ ಮೀಸಲಿಟ್ಟಿದೆ. ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯು 100 ಹಾಸಿಗೆಗಳ ಆಸ್ಪತ್ರೆಯಾಗಿದ್ದು,11 ತೀವ್ರ ನಿಘಾ ಘಟಕ (ಐಸಿಯು) ಹಾಸಿಗೆಗಳು, 15 ಎಚ್‌ಡಿಯು (ಹೈ ಡೆಪೆಂಡೆನ್ಸಿ ಯುನಿಟ್) ಹಾಸಿಗೆಗಳು, 36 ಖಾಸಗಿ ಕೊಠಡಿಗಳಿವೆ.
ಇವುಗಳನ್ನು ಪ್ರತ್ಯೇಕ ಉದ್ದೇಶಕ್ಕಾಗಿ (ಐಸೋಲೇಷನ್) ಬಳಸಬಹುದು, ಜೊತೆಗೆ 43 ಸಾಮಾನ್ಯ ಹಾಸಿಗೆಗಳ ಸೌಲಭ್ಯವಿದೆ. ಕಸ್ತೂರ್ಬಾ ಆಸ್ಪತ್ರೆ ಮತ್ತು ಡಾ. ಟಿಎಂಎ ಪೈ ಆಸ್ಪತ್ರೆಯ ವೈದ್ಯರ ತಂಡ, ನರ್ಸಿಂಗ್, ಅರೆ ವೈದ್ಯಕೀಯ ಸಿಬ್ಬಂದಿ ಮತ್ತು ಸಹಾಯಕ ಸಿಬ್ಬಂದಿಗಳ ಸಮರ್ಪಿತ ತಂಡವು ದಿನದ 24 ಗಂಟೆಗಳೂ ಕಾರ್ಯ ನಿರ್ವಹಿಸಲಿದೆ.

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಪ್ರಸ್ತುತ 3 ಕರೋನಾ ವೈರಸ್ (ಕೋವಿಡ್ – 19) ಖಚಿತಗೊಂಡಿರುವ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದೆ, ಇವುಗಳನ್ನು ಉಡುಪಿಯ ಜಿಲ್ಲಾ ಅಸ್ಪತ್ರೆಯಿಂದ ಮತ್ತು ಕಾರ್ಕಳ ತಾಲೂಕು ಆಸ್ಪತ್ರೆಗಳಿಂದ ಸ್ವೀಕರಿಸಲಾಗಿದೆ ಮಣಿಪಾಲ ಉನ್ನತ ಶಿಕ್ಷಣ ಅಕಾಡೆಮಿ (ಮಾಹೆ) ಮಣಿಪಾಲವು ಉಡುಪಿ ಜಿಲ್ಲಾಡಳಿತ ಮತ್ತು ಕರ್ನಾಟಕ ಸರ್ಕಾರದ ಸಹಯೋಗದೊಂದಿಗೆ ಕರೋನಾ ವೈರಸ್ (ಕೋವಿಡ್ – 19) ವಿರುದ್ಧದ ಸವಾಲುಗಳನ್ನು ಎದುರಿಸಲು ಸದಾ ಸಿದ್ಧವಿದೆ ಎಂದು ಮಣಿಪಾಲ ಉನ್ನತ ಶಿಕ್ಷಣ ಅಕಾಡೆಮಿ (ಮಾಹೆ)ಯ ಸಹ ಕುಲಾಧಿಪತಿ ಡಾ. ಎಚ್. ಎಸ್. ಬಲ್ಲಾಳ್ ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!