Saturday, June 6, 2026
Homeತಾಜಾ ಸುದ್ದಿಲಡಾಖ್ ನಲ್ಲಿ ಹುತಾತ್ಮರಾದ ತಮಿಳುನಾಡು ಯೋಧನ ಕುಟುಂಬಕ್ಕೆ 20 ಲಕ್ಷ ಪರಿಹಾರ: ತಮಿಳುನಾಡು ಸರ್ಕಾರ

ಲಡಾಖ್ ನಲ್ಲಿ ಹುತಾತ್ಮರಾದ ತಮಿಳುನಾಡು ಯೋಧನ ಕುಟುಂಬಕ್ಕೆ 20 ಲಕ್ಷ ಪರಿಹಾರ: ತಮಿಳುನಾಡು ಸರ್ಕಾರ

- Advertisement -
- Advertisement -

ಚೆನ್ನೈ: ಲಡಾಖ್ ನ ಗಾಲ್ವನ್ ಕಣಿವೆ ಭಾಗದಲ್ಲಿ ನಡೆದ ಭಾರತ – ಚೀನಾ ನಡುವಿನ ಮಲ್ಲಯುದ್ಧದಲ್ಲಿ ಹುತಾತ್ಮರಾದ ತಮಿಳುನಾಡಿನ ಕೆ ಪಳನಿ ಸೇರಿದಂತೆ ಭಾರತೀಯ ಸೇನೆಯ ಮೂವರು ಯೋಧರಿಗೆ ತಮಿಳುನಾಡು ಮುಖ್ಯಮಂತ್ರಿ ಇಕೆ ಪಳನಿಸ್ವಾಮಿ ಅವರು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

ಇದೇ ವೇಳೆ, ರಾಜ್ಯದ ಹುತಾತ್ಮ ಯೋಧ ಪಳನಿ ಅವರ ಕುಟುಂಬಕ್ಕೆ ತಕ್ಷಣವೇ 20 ಲಕ್ಷ ರೂಪಾಯಿ ಪರಿಹಾರ ಮತ್ತು ಕುಟುಂಬದ ಒಬ್ಬರಿಗೆ ಸರ್ಕಾರಿ ಉದ್ಯೋಗ ನೀಡುವುದಾಗಿ ಸಿಎಂ ಭರವಸೆ ನೀಡಿದ್ದಾರೆ.

ಯೋಧ ಪಳನಿ ಅವರ ಕುಟುಂಬವನ್ನು ಖುದ್ದಾಗಿ ಭೇಟಿಯಾಗಿ ಸಮಾಧಾನಪಡಿಸುವಂತೆ ಸಿಎಂ ಪಳನಿಸ್ವಾಮಿ ಅವರು ರಾಮನಾಥಪುರಂ ಜಿಲ್ಲಾಧಿಕಾರಿಗೆ ಸೂಚಿಸಿದ್ದಾರೆ. ಅಲ್ಲದೆ ಅಗಲಿದ ಯೋಧನಿಗೆ ರಾಜ್ಯ ಸರ್ಕಾರದ ಪರವಾಗಿ ಗೌರವ ಸಲ್ಲಿಸಬೇಕು ಎಂದು ನಿರ್ದೇಶಿಸಿದ್ದಾರೆ.

- Advertisement -

Latest News

error: Content is protected !!