Wednesday, June 24, 2026
Homeಕರಾವಳಿಮಂಗಳೂರುಪುತ್ತೂರು: ಸಿಎಂ ಭಾಗವಹಿಸಿದ್ದ ಶಾಸಕ ಅಶೋಕ್ ರೈ ನೇತೃತ್ವದ ಕಾರ್ಯಕ್ರಮದಲ್ಲಿ ನೂಕುನುಗ್ಗಲು; 11 ಜನರು ಅಸ್ವಸ್ಥ

ಪುತ್ತೂರು: ಸಿಎಂ ಭಾಗವಹಿಸಿದ್ದ ಶಾಸಕ ಅಶೋಕ್ ರೈ ನೇತೃತ್ವದ ಕಾರ್ಯಕ್ರಮದಲ್ಲಿ ನೂಕುನುಗ್ಗಲು; 11 ಜನರು ಅಸ್ವಸ್ಥ

- Advertisement -
- Advertisement -

ಪುತ್ತೂರು: ಶಾಸಕ ಅಶೋಕ್ ಕುಮಾರ್ ರೈ ಆಯೋಜಿಸಿದ್ದ ಅಶೋಕ ಜನಮನ ಕಾರ್ಯಕ್ರಮದಲ್ಲಿ ನೂಕುನುಗ್ಗಲು ಉಂಟಾಗಿ ಹನ್ನೊಂದಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡಿರುವ ಘಟನೆ ನಡೆದಿದೆ.

ಪುತ್ತೂರು ತಾಲೂಕು ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕ್ರೀಡಾಂಗಣದ ಸಾಮರ್ಥ್ಯಕ್ಕಿಂತಲೂ ಹೆಚ್ಚು ಜನ ಸೇರಿದ್ದ ಕಾರಣದಿಂದ
ನೂಕುನುಗ್ಗಲು ಉಂಟಾಗಿ ಜನರು ಅಸ್ವಸ್ಥರಾಗಿದ್ದಾರೆ.

ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಹನ್ನೊಂದಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಯಕ್ರಮವನ್ನು ಉದ್ಘಾಟಿಸಿದ್ದರು.

ಅಸ್ವಸ್ಥರಾದವರಿಗೆ ಪುತ್ತೂರು ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ದೀಪಾವಳಿ ಹಿನ್ನಲೆಯಲ್ಲಿ ಸಾರ್ವಜನಿಕರಿಗೆ ತಟ್ಟೆ ಮತ್ತು ವಸ್ತ್ರ ಹಂಚುವ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಮಾಲಕತ್ವದ ರೈ ಎಸ್ಟೇಟ್ ಮತ್ತು ಚಾರಿಟೇಬಲ್ ಟ್ರಸ್ಟ್ ನಿಂದ ಅಶೋಕ ಜನಮನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

- Advertisement -

Latest News

error: Content is protected !!