Wednesday, May 1, 2024
Homeಕರಾವಳಿಉಡುಪಿಉಡುಪಿ: ತಂಬಾಕು ಉತ್ಪನ್ನಗಳ ಮಾರಾಟ, ಬಳಕೆ ನಿಷೇಧ

ಉಡುಪಿ: ತಂಬಾಕು ಉತ್ಪನ್ನಗಳ ಮಾರಾಟ, ಬಳಕೆ ನಿಷೇಧ

spot_img
- Advertisement -
- Advertisement -

ಉಡುಪಿ, ಮೇ 9: ಕೋವಿಡ್-19 ರೋಗವು ವಿಶ್ವದೆಲ್ಲೆಡೆ ವ್ಯಾಪಕವಾಗಿ ಹರಡುತ್ತಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು, ಪಾನ್‌ಮಸಾಲ, ಜರ್ದಾ, ಖೈನಿ ಇತ್ಯಾದಿ ಬಳಕೆ ಮಾಡಿ ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುವುದಲ್ಲದೇ, ಜೊತೆಗೆ ಸಾಂಕ್ರಾಮಿಕ ರೋಗಗಳಾದ ಕ್ಷಯ, ನ್ಯುಮೋನಿಯ ಮತ್ತು ಕೋವಿಡ್-19 ವೈರಸ್ ಒಬ್ಬರಿಂದ ಮತ್ತೊಬ್ಬರಿಗೆ ಹರಡಲು ಕಾರಣವಾಗಬುದು.
ಬೀಡಿ, ಸಿಗರೇಟ್ ಸೇದುವುದರಿಂದ ಕೈಯಿಂದ ಬಾಯಿಗೆ ವೈರಸ್‌ಗಳು ಮಾನವನ ದೇಹವನ್ನು ಪ್ರವೇಶಿಸುವ ಸಾಧ್ಯತೆ ಇರುವುದರಿಂದ ಹಾಗೂ ದೇಹದ ಇತರೆ ಭಾಗಗಳಿಗೆ ಸೋಂಕು ಹರಡಿ ಶ್ವಾಸಕೋಶ, ಹೃದಯ ಸಂಬಂಧಿತ ಕಾಯಿಲೆಳು ಬರುವ ಸಾಧ್ಯತೆ ಇರುತ್ತದೆ.

ಅಲ್ಲದೇ ಕೋವಿಡ್-19 ಸೋಂಕಿತರು ಪಾನ್‌ಮಸಾಲ, ತಂಬಾಕು ಹಾಗೂ ತಂಬಾಕು ಉತ್ಪನ್ನಗಳನ್ನು ಬಳಸಿ ಉಗುಳುವುದರಿಂದ ವೈರಸ್ ಸೋಂಕು ಒಬ್ಬರಿಂದ ಇನ್ನೊಬ್ಬರಿಗೆ ಹರಡುವ ಭೀತಿ ಇರುತ್ತದೆ. ಆದ್ದರಿಂದ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಮುಂದಿನ ಆದೇಶದವರೆಗೂ, ತಂಬಾಕು, ಪಾನ್‌ಮಸಾಲ, ಜರ್ದಾ, ಖೈನಿ ಉತ್ಪನ್ನಗಳನ್ನು ಉಡುಪಿ ಜಿಲ್ಲೆಯಾದ್ಯಂತ ಅಂಗಡಿಗಳಲ್ಲಿ ಮಾರಾಟ ಮಾಡುವುದು ಮತ್ತು ಸಾರ್ವಜನಿಕರು ಬಳಸುವುದನ್ನು ನಿಷೇಧಿಸಲಾಗಿದೆ.

ಒಂದು ವೇಳೆ ಯಾರೇ ಆದರೂ ಆದೇಶವನ್ನು ಉಲ್ಲಂಘಿಸಿದಲ್ಲಿ, ಸಾಂಕ್ರಾಮಿಕ ರೋಗಗಳ ಕಾಯ್ದೆ-1897, ವಿಪತ್ತು ನಿರ್ವಹಣಾ ಕಾಯಿದೆ-2005, ಐಪಿಸಿ- 188,268, 269 ಮತ್ತು 270ರ ಅಡಿಯಲ್ಲಿ ಪ್ರಕರಣ ದಾಖಲಿಸಿ ಸಂಬಂಧಿತರ ಮೇಲೆ ಕಠಿಣ ಕ್ರಮ ಜರಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಆದೇಶದಲ್ಲಿ ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!