Friday, June 5, 2026
Homeತಾಜಾ ಸುದ್ದಿನಾಳೆ ರಾಜ್ಯಸಭಾ ಚುನಾವಣೆ ಹಿನ್ನೆಲೆ; ಇಂದು ಸಂಜೆ 6 ಗಂಟೆಗೆ ಕಾಂಗ್ರೆಸ್ ಶಾಸಕಾಂಗ ಪಕ್ಷ ಸಭೆ

ನಾಳೆ ರಾಜ್ಯಸಭಾ ಚುನಾವಣೆ ಹಿನ್ನೆಲೆ; ಇಂದು ಸಂಜೆ 6 ಗಂಟೆಗೆ ಕಾಂಗ್ರೆಸ್ ಶಾಸಕಾಂಗ ಪಕ್ಷ ಸಭೆ

- Advertisement -
- Advertisement -

ಬೆಂಗಳೂರು : ನಾಳೆ ರಾಜ್ಯಸಭಾ ಚುನಾವಣೆ ಹಿನ್ನೆಲೆ ಇಂದು ಸಂಜೆ 6 ಗಂಟೆಗೆ ಕಾಂಗ್ರೆಸ್ ಶಾಸಕಾಂಗ ಪಕ್ಷ ಸಭೆ ನಡೆಯಲಿದೆ. ನಾಳೆ ಬೆಂಗಳೂರಿನ ಮಾನ್ಯತಾ ಟೆಕ್ ಪಾರ್ಕ್ ನ ಹಿಲ್ಟನ್ ಹೋಟೆಲ್ ಅಲ್ಲಿ ಸಭೆ ನಡೆಯಲಿದೆ.

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕಾಂಗ ಸಭೆ ನಡೆಯಲಿದೆ. ಕರ್ನಾಟಕ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದಿಪ್ ಸಿಂಗ್ ಸುರ್ಜೆವಾಲ, ರಾಜ್ಯಸಭಾ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿಗಳಾದ ಅಜಯ್ ಮಕೇನ್ ಸೈಯದ್ ಹುಸೇನ್ ಜೆಸಿ ಚಂದ್ರಶೇಖರ್ ಸಭೆಯಲ್ಲಿ ಭಾಗಿಯಾಗಲಿದ್ದಾರೆ.

ಅಲ್ಲದೆ ಈ ಒಂದು ಸಭೆಯಲ್ಲಿ ಭಾಗಿಯಾಗುವಂತೆ ಎಲ್ಲಾ ಶಾಸಕರಿಗೂ ಸೂಚನೆ ನೀಡಲಾಗಿದೆ. ಅಧಿವೇಶನ ನಂತರ ನೇರವಾಗಿ ಬರಲು ಸೂಚನೆ ನೀಡಲಾಗಿದೆ. ನಾಳೆ ಬೆಳಗ್ಗೆ ಹೋಟೆಲ್ ನಿಂದ ನೇರವಾಗಿ ವಿಧಾನಸೌಧಕ್ಕೆ ಪ್ರಯಾಣ ಬೆಳೆಸಲಾಗುತ್ತದೆ. ಮತದಾನಕ್ಕೆ ಕಾಂಗ್ರೆಸ್ ಶಾಸಕರನ್ನು ಒಟ್ಟಿಗೆ ಕರೆತರಲು ಪ್ಲ್ಯಾನ್ ಹಾಕಿಕೊಳ್ಳಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

- Advertisement -

Latest News

error: Content is protected !!