- Advertisement -
- Advertisement -
ಬೆಂಗಳೂರು; ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಗೆ ರಾಜಾತಿಥ್ಯ ನೀಡಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ದರ್ಶನ್ ರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲು ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ಅನುಮತಿ ನೀಡಿದೆ. ಈ ಹಿನ್ನೆಲೆ ಕಾರಾಗೃಹ ಇಲಾಖೆಯು ಇಂದು ಮಧ್ಯಾಹ್ನವೇ ನಟ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಿದೆ.
ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಬಳ್ಳಾರಿ ಜೈಲಿಗೆ ಇಂದು ಮಧ್ಯಾಹ್ನ 1 ಗಂಟೆಗೆ ಶಿಫ್ಟ್ ಮಾಡಲಿದೆ. ಈಗಾಗಲೇ ಬಳ್ಳಾರಿ ಜೈಲಿನಲ್ಲಿ ದರ್ಶನ್ ಅವರನ್ನು ಶಿಫ್ಟ್ ಮಾಡುವ ಹಿನ್ನೆಲೆ ಎಲ್ಲಾ ರೀತಿಯ ಸಿದ್ಧತೆ ಗಳನ್ನು ಮಾಡಿಕೊಳ್ಳಲಾಗಿದೆ.
- Advertisement -