Thursday, June 25, 2026
Homeತಾಜಾ ಸುದ್ದಿಇಂದು ಇಡಿ ಮುಂದೆ ವಿಚಾರಣೆಗೆ ಹಾಜರಾಗಲಿರುವ ಡಿ.ಕೆ. ಶಿವಕುಮಾರ್ ಮತ್ತು ಡಿ.ಕೆ. ಸುರೇಶ್

ಇಂದು ಇಡಿ ಮುಂದೆ ವಿಚಾರಣೆಗೆ ಹಾಜರಾಗಲಿರುವ ಡಿ.ಕೆ. ಶಿವಕುಮಾರ್ ಮತ್ತು ಡಿ.ಕೆ. ಸುರೇಶ್

- Advertisement -
- Advertisement -

ನವದೆಹಲಿ: ಇಂದು ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯವು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಸಹೋದರ, ಸಂಸದ ಡಿ.ಕೆ. ಸುರೇಶ್ ಅವರಿಗೆ ಮತ್ತೆ ಸಮನ್ಸ್ ಜಾರಿ ಮಾಡಿದೆ.

ಹೀಗಾಗಿ ಇಂದು ಡಿ.ಕೆ. ಶಿವಕುಮಾರ್ ಮತ್ತು ಡಿ.ಕೆ. ಸುರೇಶ್ ಇಡಿ ಮುಂದೆ ವಿಚಾರಣೆಗೆ ಹಾಜರಾಗಲಿದ್ದಾರೆ.

ಈ ಮೊದಲು ಸೆಪ್ಟೆಂಬರ್ 23 ರಂದು ಇಬ್ಬರಿಗೂ ಅಕ್ಟೋಬರ್ 7 ರಂದು ವಿಚಾರಣೆಗೆ ಬರುವಂತೆ ಇಡಿ ಸಮನ್ಸ್ ಜಾರಿ ಮಾಡಿತ್ತು. ಆದರೆ ಭಾರತ್ ಜೋಡೋ ಪಾದಯಾತ್ರೆ ಹಿನ್ನೆಲೆಯಲ್ಲಿ ಕಾಲಾವಕಾಶ ನೀಡುವಂತೆ ಶಿವಕುಮಾರ್ ಹಾಗೂ ಸುರೇಶ್ ಅವರು ಇಡಿಗೆ ಪತ್ರ ಬರೆದು ಕೋರಿದ್ದರು.

ಆದರೆ ಅದಕ್ಕೆ ನಿರಾಕರಿಸಿರುವ ಇಡಿ ಇಂದೇ ವಿಚಾರಣೆಗೆ ಹಾಜರಾಗುವಂತೆ ಅಕ್ಟೋಬರ್ 5ರಂದು ಮತ್ತೊಂದು ನೋಟಿಸ್ ಜಾರಿ ಮಾಡಿತ್ತು.

ಹೀಗಾಗಿ ಇಂದು ಡಿ.ಕೆ. ಶಿವಕುಮಾರ್ ಮತ್ತು ಡಿ.ಕೆ‌. ಸುರೇಶ್ ಇಂದು ನವದೆಹಲಿಯಲ್ಲಿ ಇಡಿ ಮುಂದೆ ವಿಚಾರಣೆಗೆ ಹಾಜರಾಗಲಿದ್ದಾರೆ.

- Advertisement -

Latest News

error: Content is protected !!