Friday, June 5, 2026
Homeತಾಜಾ ಸುದ್ದಿಇಂದು ಸಚಿವ ಸಂಪುಟ ವಿಸ್ತರಣೆ ಹಿನ್ನೆಲೆ ದೆಹಲಿಗೆ ತೆರಳಲಿರುವ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ....

ಇಂದು ಸಚಿವ ಸಂಪುಟ ವಿಸ್ತರಣೆ ಹಿನ್ನೆಲೆ ದೆಹಲಿಗೆ ತೆರಳಲಿರುವ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್

- Advertisement -
- Advertisement -

ಬೆಂಗಳೂರು : ಸಚಿವ ಸಂಪುಟ ವಿಸ್ತರಣೆ ಹಿನ್ನೆಲೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೈಕಮಾಂಡ್ ಜೊತೆಗೆ ಚರ್ಚಿಸಲು ಇಂದು ಸಂಜೆ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.

ಇಂದು ಸಂಜೆ 6 ಗಂಟೆ ಸುಮಾರಿಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಒಟ್ಟಾಗಿಯೇ ವಿಮಾನದ ಮೂಲಕ ದೆಹಲಿಗೆ ತೆರಳಲಿದ್ದು, ಹೈಕಮಾಂಡ್ ನಾಯಕರ ಜೊತೆ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ. ಸಚಿವ ಸ್ಥಾನಕ್ಕೆ ಈಗಾಗಲೇ ಲಾಭಿ ಶುರುವಾಗಿದ್ದು, ಸಿದ್ದರಾಮಯ್ಯ ಹಾಗೂ ಡಿಕೆಶಿ ಆಪ್ತರು ಸಚಿವ ಸ್ಥಾನಕ್ಕಾಗಿ ಪಟ್ಟು ಹಿಡಿದಿದ್ದಾರೆ.

- Advertisement -

Latest News

error: Content is protected !!