Thursday, June 4, 2026
Homeಕರಾವಳಿಇಂದು ಮಂಗಳೂರಿಗೆ ಆಗಮಿಸಲಿರುವ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ

ಇಂದು ಮಂಗಳೂರಿಗೆ ಆಗಮಿಸಲಿರುವ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ

- Advertisement -
- Advertisement -

ಮಂಗಳೂರು: ಇಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಮೇ 1ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಿ‌ ವಿವಿಧ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಮಧ್ಯಾಹ್ನ ಕೃಷ್ಣಾಪುರದ ಫಿಝ ಗಾರ್ಡನ್ ಹೆಲಿಪಾಡ್‌ ಗೆ ಅಗಮಿಸಲಿದ್ದು, ಸುರತ್ಕಲ್ ನಲ್ಲಿ ಸುದ್ದಿಗೋಷ್ಟಿ ನಡೆಸಲಿದ್ದಾರೆ.

ಬಳಿಕ ಸುಂಕದಕಟ್ಟೆ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ಬಳಿಕ ಬಲವಂಡಿ ದೈವಸ್ಥಾನ, ಗುರುಪುರ ಕಂಬಳ ದರ್ಗಾ ಭೇಟಿ‌ ನೀಡಲಿದ್ದಾರೆ. ಸಂಜೆ 5 ಗಂಟೆಗೆ ಗುರುಪುರ ಕೈಕಂಬದ ವಸ್ತು ಪ್ರದರ್ಶನ ಮೈದಾನದಲ್ಲಿ ನಡೆಯುವ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಮೇ 1 ಕಾರ್ಮಿಕ ದಿನದ ಹಿನ್ನೆಲೆಯಲ್ಲಿ ಕಾರ್ಮಿಕರಿಗೆ ಸನ್ಮಾನ ನಡೆಯಲಿದೆ.

ಮೇ.5ಕ್ಕೆ ಎಚ್.ಡಿ.ಕೆ. ಕೃಷ್ಣಾಪುರಕ್ಕೆ ಮಾಜಿ ಸಿಎಂ ಎಚ್.ಡಿ.‌ಕುಮಾರಸ್ವಾಮಿ ಅವರು ಮೇ 5ರಂದು ಕೃಷ್ಣಾಪುರದಲ್ಲಿ ನಡೆಯುವ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಫಾರೂಕ್ ಅವರು ತಿಳಿಸಿದರು.

- Advertisement -

Latest News

error: Content is protected !!