Tuesday, May 21, 2024
Homeತಾಜಾ ಸುದ್ದಿಇಂದು 15ನೇ ರಾಷ್ಟ್ರಪತಿಯಾಗಿ‌ ಪ್ರಮಾಣವಚನ ಸ್ವೀಕರಿಸಲಿದ್ದಾರೆ ದ್ರೌಪದಿ ಮುರ್ಮು

ಇಂದು 15ನೇ ರಾಷ್ಟ್ರಪತಿಯಾಗಿ‌ ಪ್ರಮಾಣವಚನ ಸ್ವೀಕರಿಸಲಿದ್ದಾರೆ ದ್ರೌಪದಿ ಮುರ್ಮು

spot_img
- Advertisement -
- Advertisement -

ನವದೆಹಲಿ: ಭಾರತದ 15ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಸಂಸತ್ತಿನ ಸೆಂಟ್ರಲ್ ಹಾಲ್ ನಲ್ಲಿ ಬೆಳಿಗ್ಗೆ 10. 15ಕ್ಕೆ ಈ ಸಮಾರಂಭ ನಡೆಯಲಿದ್ದು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ಪ್ರಮಾಣವಚನ ಬೋಧಿಸಲಿದ್ದಾರೆ.

ಪ್ರಮಾಣವಚನ ಸಮಾರಂಭಕ್ಕೆ ನೂತನ ರಾಷ್ಟ್ರಪತಿ ದ್ರೌಪದಿ ಮುರ್ಮ ಹಾಗೂ ನಿರ್ಗಮಿತ ರಾಷ್ಟ್ರಪತಿ ರಾಮನಾಥ್ ಕೋವಿಂದ್ ವಿಧಿಯುಕ್ತ ಮೆರವಣಿಗೆ ಮೂಲಕ ಆಗಮಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಪ್ರಮಾಣ ವಚನ ಸಮಾರಂಭದಲ್ಲಿ ಉಪಸ್ಥಿತರಿರಲಿದ್ದಾರೆ.

ನೂತನ ರಾಷ್ಟ್ರಪತಿಗಳ ಪ್ರಮಾಣ ವಚನಕ್ಕೂ ಮುನ್ನ 21 ಸುತ್ತುಗಳ ಗುಂಡು ಹಾರಾಟ ನಡೆಸಿ ಗೌರವ ವಂದನೆ ಸಲ್ಲಿಸಲಾಗುತ್ತದೆ. ಪ್ರಮಾಣವಚನದ ನಂತರ ರಾಷ್ಟ್ರಪತಿ ದ್ರೌಪದಿ ಮುರ್ಮು ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ.

- Advertisement -
spot_img

Latest News

error: Content is protected !!