- Advertisement -
- Advertisement -
ನವದೆಹಲಿ: ರಾಜ್ಯ ವಿಧಾನಸಭೆ ಚುನಾವಣೆಗೆ ಇವತ್ತೇ ಮುಹೂರ್ತ ಫಿಕ್ಸ್ ಆಗುವ ಸಾಧ್ಯತೆ ಇದೆ. ಇಂದು ಬೆಳಿಗ್ಗೆ 11:30 ಕ್ಕೆ ದೆಹಲಿಯಲ್ಲಿ ಕೇಂದ್ರ ಚುನಾವಣಾ ಆಯೋಗ ಸುದ್ದಿಗೋಷ್ಠಿ ಕರೆದಿದೆ.

ಚುನಾವಣಾ ಆಯೋಗದ ಕಚೇರಿಯಲ್ಲಿ ಸುದ್ದಿಗೋಷ್ಠಿ ಕರೆಯಲಾಗಿದ್ದು, ಕೇಂದ್ರ ಮುಖ್ಯ ಚುನಾವಣಾ ಆಯುಕ್ತರಾದ ರಾಜೀವ್ ಕುಮಾರ್ ದಿನಾಂಕ ಘೋಷಣೆ ಮಾಡಲಿದ್ದಾರೆ.
ಈಗಾಗಲೇ ರಾಜ್ಯದಲ್ಲಿ ಚುನಾವಣಾ ಸಿದ್ದತೆಯ ಪರಿಶೀಲನೆ ನಡೆಸಿದ ಕೇಂದ್ರ ಚುನಾವಣಾ ಆಯೋಗ ಯಾವುದೇ ಕ್ಷಣದಲ್ಲಿ ವಿಧಾನಸಭೆ ಚುನಾವಣೆ ಘೋಷಣೆಗೆ ಸಿದ್ಧತೆ ಮಾಡಿಕೊಂಡಿತ್ತು.
- Advertisement -