Friday, May 3, 2024
Homeತಾಜಾ ಸುದ್ದಿಇಂದು ಮತ್ತೆ ಮೈಸೂರಿಗೆ ಆಗಮಿಸಲಿರುವ ಪ್ರಧಾನಿ ಮೋದಿ

ಇಂದು ಮತ್ತೆ ಮೈಸೂರಿಗೆ ಆಗಮಿಸಲಿರುವ ಪ್ರಧಾನಿ ಮೋದಿ

spot_img
- Advertisement -
- Advertisement -

ಮೈಸೂರಿನಲ್ಲಿ ಹುಲಿ ಸಂರಕ್ಷಣಾ ಯೋಜನೆ 50ನೇ ವರ್ಷಾಚರಣೆ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಇಂದು ರಾತ್ರಿ 8ಗಂಟೆಗೆ ಮೈಸೂರಿಗೆ ಆಗಮಿಸಲಿದ್ದಾರೆ .

ಮೋದಿಯವರು ಮೈಸೂರಿನ ರ‍್ಯಾಡಿಸನ್​ ಬ್ಲೂ ಹೋಟೆಲ್​​ನಲ್ಲಿ ವಾಸ್ತವ್ಯ ಹೂಡಲಿದ್ದಾರೆ.ಏ.9ರ ಬೆಳಗ್ಗೆ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ತೆರಳಲಿದ್ದು, ಏ.9ರ ಬೆಳಗ್ಗೆ 11 ಗಂಟೆಗೆ ಕೆಎಸ್​ಒಯು ಘಟಿಕೋತ್ಸವ ಭವನಕ್ಕೆ ಭೇಟಿ ನೀಡಲಿದ್ದು, ಹುಲಿ ಸಂರಕ್ಷಣಾ ಯೋಜನೆ 50ನೇ ವರ್ಷಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಬಳಿಕ ಚಾಮರಾಜನಗರ ಜಿಲ್ಲೆ ಬಂಡೀಪುರಕ್ಕೆ ಪ್ರಯಾಣ ಬೆಳೆಸಲಿದ್ದಾರೆ. ಏ.9ರ ಬೆಳಗ್ಗೆ 7.30ಕ್ಕೆ ಬಂಡೀಪುರ ಉದ್ಯಾನವನಕ್ಕೆ ಭೇಟಿ ನೀಡಲಿದ್ದು, ಬಳಿಕ ಸಫಾರಿ ಮಾಡಲಿದ್ದಾರೆ. ನೀಲಗಿರಿಸ್​​ ಅರಣ್ಯ ಪ್ರದೇಶಕ್ಕೂ ಪ್ರಧಾನಿ ಮೋದಿ ಭೇಟಿ ನೀಡಲಿದ್ದಾರೆ. ನಂತರ ಮೈಸೂರಿಗೆ ವಾಪಸ್​ ಆಗಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಆಗಮನ ಹಿನ್ನೆಲೆ ಮೈಸೂರುಜಿಲ್ಲೆಯ ಸುತ್ತಮುತ್ತ ಬಿಗಿ ಪೊಲೀಸ್‌ ಬಂದೋಬಸ್ತ್‌ ವಹಿಸುವ ಮೂಲಕ ಹೆಚ್ಚಿನ ಭದ್ರತೆಯನ್ನು ವಹಿಸಲಿದೆ.

- Advertisement -
spot_img

Latest News

error: Content is protected !!