Friday, June 5, 2026
Homeತಾಜಾ ಸುದ್ದಿಇಂದು ಬೆಳಗ್ಗೆ 8-15ಕ್ಕೆ ಕಾಂಗ್ರೆಸ್ ಸೇರ್ಪಡೆಯಾಗಲಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್

ಇಂದು ಬೆಳಗ್ಗೆ 8-15ಕ್ಕೆ ಕಾಂಗ್ರೆಸ್ ಸೇರ್ಪಡೆಯಾಗಲಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್

- Advertisement -
- Advertisement -

ಬೆಂಗಳೂರು : ನಿನ್ನೆ ಬಿಜೆಪಿಗೆ ರಾಜೀನೆ ನೀಡಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಇಂದು ಇಂದು ಬೆಳಗ್ಗೆ 8.15 ಕ್ಕೆ ಬೆಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಸಮ್ಮುಖದಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಲಿದ್ದಾರೆ.

ಭಾನುವಾರ ಶಿರಸಿಗೆ ತೆರಳಿ ಸಭಾಧ್ಯಕ್ಷ ವಿಶ್ವೇಶ್ವರ್ ಹೆಗಡೆ ಕಾಗೇರಿ ಅವರನ್ನು ಖುದ್ದಾಗಿ ಭೇಟಿ ಮಾಡಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಸಂಜೆ ಬೆಂಗಳೂರಿಗೆ ಆಗಮಿಸಿದ ಜಗದೀಶ್ ಶೆಟ್ಟರ್ ಅವರ ಬೀಗರಾದ ಗಣೇಶ್ ಶಾಮನೂರು ಅವರ ನಿವಾಸದಲ್ಲಿ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ, ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಎಂ.ಬಿ.ಪಾಟೀಲ್ ಅವರೊಂದಿಗೆ ಮಹತ್ವದ ಸಭೆ ನಡೆಯಿತು. ಸಭೆ ಬಳಿಕ ಕಾಂಗ್ರೆಸ್ ಸೇರ್ಪಡೆಯಾಗುವ ನಿರ್ಧಾರ ಮಾಡಿದ್ದಾರೆ .

ಅದರಂತೆ ಇಂದು ಬೆಳಗ್ಗೆ 8.15 ಕ್ಕೆ ಕೆಪಿಸಿಸಿ ಕಚೇರಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರ ಸುದ್ದಿಗೋಷ್ಠಿ ಕರೆಯಲಾಗಿದೆ. ಈ ವೇಳೆ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆಯಾಗುವ ಸಾಧ್ಯತೆ ಇದೆ.

- Advertisement -

Latest News

error: Content is protected !!