Wednesday, June 24, 2026
Homeಕರಾವಳಿಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣದ ಆರೋಪಿ ಶಾರೀಕ್​ಗೆ ಇಂದು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ

ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣದ ಆರೋಪಿ ಶಾರೀಕ್​ಗೆ ಇಂದು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ

- Advertisement -
- Advertisement -

ಬೆಂಗಳೂರು: ಮಂಗಳೂರಿನಲ್ಲಿ ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣದ ಆರೋಪಿ ಶಾರೀಕ್​ಗೆ ಇಂದು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ನಡೆಯಲಿದೆ.

ಕುಕ್ಕರ್ ಬಾಂಬ್ ಸ್ಪೋಟದಿಂದಾಗಿ ಶಾರೀಕ್ ಮುಖ ಹಾಗೂ ಎದೆಯ ಭಾಗಕ್ಕೆ ಗಂಭೀರ ಗಾಯವಾಗಿದ್ದು, ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ಪ್ಲಾಸ್ಟಿಕ್ ಸರ್ಜನ್ ಕೆ.ಟಿ.ರಮೇಶ್ ನೇತೃತ್ವದಲ್ಲಿ ಶಸ್ತ್ರಚಿಕಿತ್ಸೆ ನಡೆಯಲಿದೆ. ಶಸ್ತ್ರಚಿಕಿತ್ಸೆ ಬಳಿಕ ಏಳೆಂಟು ದಿನಗಳಲ್ಲಿ ಡಿಸ್ಚಾರ್ಜ್ ಮಾಡುವ ಸಾಧ್ಯತೆ ಇದೆ. ಎನ್‌ಐಎ ತನಿಖಾಧಿಕಾರಿಗಳ ತಂಡ ಆರೋಪಿಯನ್ನು ವಶಕ್ಕೆ ಪಡೆಯಲಿದೆ.

ಬಾಂಬ್ ಸ್ಫೋಟ ಪ್ರಕರಣದ ಶಾರೀಕ್​ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ನಂತರ ಹೆಚ್ಚಿನ ಚಿಕಿತ್ಸೆ ಅಗತ್ಯವಿರುವುದರಿಂದ ಡಿಸೆಂಬರ್ 16ರ ರಾತ್ರಿ ಮಂಗಳೂರಿನಿಂದ ಬಿಗಿ ಭದ್ರತೆಯಲ್ಲಿ ಆಂಬುಲೆನ್ಸ್ ಮೂಲಕ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಕರೆತರಲಾಗಿತ್ತು.

- Advertisement -

Latest News

error: Content is protected !!