Wednesday, June 3, 2026
Homeಕರಾವಳಿಇಂದು ಕಾಸರಗೋಡಿನಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಚುನಾವಣಾ ಪ್ರಚಾರ

ಇಂದು ಕಾಸರಗೋಡಿನಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಚುನಾವಣಾ ಪ್ರಚಾರ

- Advertisement -
- Advertisement -

ಕಾಸರಗೋಡು: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇಂದು ಕಾಸರಗೋಡಿನಲ್ಲಿ ಬಿಜೆಪಿ ಪರ ಚುನಾವಣಾ ಪ್ರಚಾರ ನಡೆಸಲಿದ್ದಾರೆ.

ಬೆಳಿಗ್ಗೆ 10 ಗಂಟೆಗೆ ಕಾಸರಗೋಡಿನ ತಾಳಿಪಡ್ಪು ಮೈದಾನದಲ್ಲಿ ನಡೆಯಲಿರುವ ಬಹಿರಂಗ ಸಾರ್ವಜನಿಕ ಸಮಾವೇಶದಲ್ಲಿ ರಾಜನಾಥ್ ಸಿಂಗ್ ಭಾಗವಹಿಸಲಿದ್ದು, ಬಿಜೆಪಿ ಅಭ್ಯರ್ಥಿ ಎಂ.ಎಲ್. ಅಶ್ವಿನಿ ಪರ ಪ್ರಚಾರ ಕೈಗೊಳ್ಳಲಿದ್ದಾರೆ.

ಈ ಹಿನ್ನೆಲೆಯಲ್ಲಿ ಕಾಸರಗೋಡು‌ ಜಿಲ್ಲಾ ಬಿಜೆಪಿ ಮುಖಂಡರೊಂದಿಗೆ ಕೇರಳ ರಾಜ್ಯ ಬಿಜೆಪಿ ಸಹ ಚುನಾವಣಾ ಉಸ್ತುವಾರಿ ನಳೀನ್ ಕುಮಾರ್ ಕಟೀಲ್ ಪೂರ್ವಸಿದ್ಧತಾ ಸಭೆ ನಡೆಸಿದರು.

ಸಮಾವೇಶ ನಡೆಯುವ ತಾಳಿಪಡ್ಪು ಮೈದಾನಕ್ಕೆ ತೆರಳಿ ಸಿದ್ಧತೆಯನ್ನೂ ನಳೀನ್ ಕುಮಾರ್ ಕಟೀಲ್ ಪರಿಶೀಲಿಸಿದರು.

ಬಿಜೆಪಿ ಕಾಸರಗೋಡು ಜಿಲ್ಲಾಧ್ಯಕ್ಷ ಕುಂಟಾರು ರವೀಶ್ ತಂತ್ರಿ, ಪಕ್ಷದ ಪ್ರಮುಖರಾದ ಸುರೇಶ್ ಶೆಟ್ಟಿ, ವಿಜಯ್ ರೈ ಹಾಗೂ ಕೆ. ರಂಜಿತ್ ಉಪಸ್ಥಿತರಿದ್ದರು.

- Advertisement -

Latest News

error: Content is protected !!