Friday, June 5, 2026
Homeತಾಜಾ ಸುದ್ದಿಕಮಲ ಎಸೆದು “ಕೈ” ಹಿಡಿದ ಜಗದೀಶ್ ಶೆಟ್ಟರ್; ಇಂದು ರಾಹುಲ್ ಗಾಂಧಿ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆ?

ಕಮಲ ಎಸೆದು “ಕೈ” ಹಿಡಿದ ಜಗದೀಶ್ ಶೆಟ್ಟರ್; ಇಂದು ರಾಹುಲ್ ಗಾಂಧಿ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆ?

- Advertisement -
- Advertisement -

ಬೆಂಗಳೂರು; ಇತ್ತ ಬಿಜೆಪಿ ರಾಜೀನಾಮೆ ನೀಡುತ್ತಿದ್ದಂತೆ ಜಗದೀಶ್ ಶೆಟ್ಟರ್ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಥಿ ಮಾಡ್ತಾರೆ ಅಂತಾ ಎಲ್ಲರೂ ಅಂದುಕೊಂಡಿದ್ದರು.ಆದರೆ ಶೆಟ್ಟರ್ ಶಾಕ್ ಕೊಟ್ಟಿದ್ದಾರೆ.

ಇಂದು  ಬೆಂಗಳೂರಿಗೆ ತೆರಳಿ ರಾಹುಲ್ ಗಾಂಧಿ ಸಮ್ಮುಖದಲ್ಲಿಯೇ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆ ಸಾಧ್ಯತೆಯಿದೆ ಎನ್ನಲಾಗಿದೆ.ಟಿಕೆಟ್‌ ವಂಚನೆಯಿಂದ ಬೇಸರಗೊಂಡ ಜಗದೀಶ್ ಶೆಟ್ಟರ್ ರಾಜೀನಾಮೆ ನೀಡಿದ್ದಾರೆ.ಅಲ್ಲದೇ ಕಾಂಗ್ರೆಸ್‌ ಪಕ್ಷದತ್ತ ಮುಖ ಮಾಡಿದ್ದು ಭಾರೀ ಚರ್ಚೆಗೆ ಗ್ರಾಸವಾಗಿದೆ. ಹುಬ್ಬಳ್ಳಿ, ಧಾರವಾಡ ಸೆಂಟ್ರಲ್ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಶೆಟ್ಟರ್‌ಗೆ ಬಿಜೆಪಿ ಟಿಕೆಟ್ ಕೈ ತಪ್ಪಿದ ಬೆನ್ನಲ್ಲೆ ದೆಹಲಿಗೆ ಹೋಗಿ ಹೈಕಮಾಂಡ್‌ನೊಂದಿಗೆ ಚರ್ಚೆ ನಡೆಸಿದ್ದರು.

ಶನಿವಾರ ರಾತ್ರಿ ಕೇಂದ್ರ ಸಚಿವರಾದ ಧರ್ಮೇಂದ್ರ ಪ್ರಧಾನ್, ಪ್ರಹ್ಲಾದ್ ಜೋಷಿ ಮತ್ತು ಸಿಎಂ ಬೊಮ್ಮಾಯಿ ಮನೆಗೆ ತೆರಳಿ ಮಾತುಕತೆ ನಡೆಸಿದ್ದರು. ಸಂಧಾನ ಮಾತುಕತೆ ವಿಫಲವಾದ ಬೆನ್ನಲ್ಲೇ ಸ್ಪೀಕರ್ ವಿಶ್ವೇಶ್ವರ್ ಹೆಗಡೆ ಅವರಿಗೆ ಶಾಸಕ ಸ್ಥಾನಕ್ಕೆ ರಾಜೀನಾಮೆ ಪತ್ರವನ್ನು ನೀಡಿದ್ದಾರೆ. ಇದೀಗ ಬಿಜೆಪಿಗೆ ರಾಜೀನಾಮೆ ನೀಡಿದ ಬೆನ್ನಲ್ಲೆ ಕಾಂಗ್ರೆಸ್‌ಗೆ ಸೇರಲು ಮುಂದಾಗಿದ್ದಾರೆ ಅಷ್ಟೇ ಅಲ್ಲದೇ ಕಾಂಗ್ರೆಸ್‌ ಶೆಟ್ಟರ್‌ ಭರ ಮಾಡಿಕೊಳ್ಳಲು ಭರದಿಂದ ಸಿದ್ದತೆ ನಡೆಸಲಾಗುತ್ತಿದೆ.

- Advertisement -

Latest News

error: Content is protected !!