Thursday, July 16, 2026
Homeತಾಜಾ ಸುದ್ದಿಇಂದು ಎಸ್ಸೆಸೆಲ್ಸಿ ಫಲಿತಾಂಶ ಪ್ರಕಟ: ರಿಸಲ್ಟ್ ನೋಡುವುದು ಹೇಗೆ? ಇಲ್ಲಿದೆ ಮಾಹಿತಿ...

ಇಂದು ಎಸ್ಸೆಸೆಲ್ಸಿ ಫಲಿತಾಂಶ ಪ್ರಕಟ: ರಿಸಲ್ಟ್ ನೋಡುವುದು ಹೇಗೆ? ಇಲ್ಲಿದೆ ಮಾಹಿತಿ…

- Advertisement -
- Advertisement -

ಬೆಂಗಳೂರು : ಇಂದು ಮಧ್ಯಾಹ್ನ 3.30ಕ್ಕೆ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಳ್ಳಲಿದೆ. ಈ ಕುರಿತಂತೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು ಮಂಡಳಿಯ ಸಭಾಂಗಣದಲ್ಲಿ ಇಂದು ಮಧ್ಯಾಹ್ನ 3.30ಕ್ಕೆ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಘೋಷಿಸಲಿದ್ದಾರೆ ಎಂದು ತಿಳಿಸಿದೆ. ಅದರಂತೆ ಇಂದು ಮಧ್ಯಾಹ್ನ 3.30ಕ್ಕೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯ  ಫಲಿತಾಂಶವನ್ನು ಪ್ರಕಟಿಸಲಿದ್ದಾರೆ.

ಇಂದು ಮಧ್ಯಾಹ್ನ 3.30ಕ್ಕೆ ಸುದ್ದಿಗೋಷ್ಠಿಯಲ್ಲಿ ಶಿಕ್ಷಣ ಸಚಿವರು ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶವನ್ನು ಘೋಷಣೆ ಮಾಡುತ್ತಿದ್ದಂತೇ, ಆ ಬಳಿಕ, ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಅಧಿಕೃತ ಜಾಲತಾಣ sslc.karnataka.gov.in, kseeb.kar.nic.in ಅಥವಾ karresults.nic.in ನಲ್ಲಿ ಪ್ರಕಟವಾಗಲಿದೆ.

ವಿದ್ಯಾರ್ಥಿಗಳು ಈ ಮೇಲ್ಕಂಡ ಜಾಲತಾಣಗಳಿಗೆ ಭೇಟಿ ನೀಡಿ, ತಮ್ಮ ನೋಂದಣಿ ಸಂಖ್ಯೆಯನ್ನು ನಮೂದಿಸಿದ ನಂತ್ರ, ನಿಮ್ಮ ಎಸ್ ಎಸ್ ಎಲ್ ಸಿ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ.

- Advertisement -

Latest News

error: Content is protected !!