Sunday, June 29, 2025
Homeತಾಜಾ ಸುದ್ದಿಇಂದು ನಾಮಪತ್ರ ಸಲ್ಲಿಸಲಿರುವ ಘಟಾನುಘಟಿ ನಾಯಕರು

ಇಂದು ನಾಮಪತ್ರ ಸಲ್ಲಿಸಲಿರುವ ಘಟಾನುಘಟಿ ನಾಯಕರು

spot_img
- Advertisement -
- Advertisement -

ಬೆಂಗಳೂರು : ಇಂದು ರಾಜ್ಯದ ಘಟಾನುಘಟಿ ನಾಯಕರು ನಾಮಪತ್ರ ಸಲ್ಲಿಸಲಿದ್ದಾರೆ. ಇಂದು ಶುಭ ದಿನವಾಗಿರೋದರಿಂದ   ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಆರ್. ಅಶೋಕ್, ವಿ. ಸೋಮಣ್ಣ ಸೇರಿದಂತೆ ಹಲವು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲಿದ್ದಾರೆ ಎನ್ನಲಾಗಿದೆ.

ಇಂದು ಚನ್ನಪಟ್ಟಣ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಕನಕಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಡಿ.ಕೆ.ಶಿವಕುಮಾರ್, ರಾಮನಗರ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ, ಕೆ.ಆರ್.ಪೇಟೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕೆ.ಸಿ.ನಾರಾಯಣಗೌಡ, ವರುಣ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ವಿ. ಸೋಮಣ್ಣ, ಚಿಕ್ಕಮಗಳೂರು ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸಿ.ಟಿ ರವಿ ನಾಮಪತ್ರ ಸಲ್ಲಿಸಲಿದ್ದಾರೆ.

ಚಿಕ್ಕನಾಯಕನಹಳ್ಳಿ ಕ್ಷೇತ್ರದಿಂದ ಬಿಜೆಪ ಅಭ್ಯರ್ಥಿಯಾಗಿ ಜೆ.ಸಿ.ಮಾಧುಸ್ವಾಮಿ, ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಬಿಜೆಪ ಅಭ್ಯರ್ಥಿಯಾಗಿ ಡಾ.ಸುಧಾಕರ್, ಯಶವಂತಪುರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಎಸ್.ಟಿ. ಸೋಮಶೇಖರ್, ಪದ್ಮನಾಭನಗರದಿಂದ ಬಿಜೆಪ ಅಭ್ಯರ್ಥಿಯಾಗಿ ಆರ್. ಅಶೋಕ್ ನಾಮಪತ್ರ ಸಲ್ಲಿಸಲಿದ್ದಾರೆ.

- Advertisement -
spot_img

Latest News

error: Content is protected !!