Saturday, June 27, 2026
Homeಕರಾವಳಿವಿಟ್ಲ: ಬಸ್ ತಂಗುದಾಣ ಹಾಗೂ ಅಂಗಡಿಗೆ ಡಿಕ್ಕಿ ಹೊಡೆದು ಹೋಟೆಲ್ ಗೆ ನುಗ್ಗಿದ ಟೋಯಿಂಗ್ ಲಾರಿ

ವಿಟ್ಲ: ಬಸ್ ತಂಗುದಾಣ ಹಾಗೂ ಅಂಗಡಿಗೆ ಡಿಕ್ಕಿ ಹೊಡೆದು ಹೋಟೆಲ್ ಗೆ ನುಗ್ಗಿದ ಟೋಯಿಂಗ್ ಲಾರಿ

- Advertisement -
- Advertisement -


ವಿಟ್ಲ: ಟೋಯಿಂಗ್ ಲಾರಿಯೊಂದು ಬಸ್ ತಂಗುದಾಣ, ಅಂಗಡಿಗಳಿಗೆ ಡಿಕ್ಕಿ ಹೊಡೆದು ಬಳಿಕ ಹೋಟೆಲ್ ಗೆ ನುಗ್ಗಿದ ಪರಿಣಾಮ ಚಾಲಕ ಗಂಭೀರ ಗಾಯಗೊಂಡ ಘಟನೆ ಮಾಣಿ-ಮೈಸೂರು ರಾಜ್ಯ ಹೆದ್ದಾರಿಯ ಕೊಡಾಜೆ ಎಂಬಲ್ಲಿ ನಡೆದಿದೆ.


ಟೋಯಿಂಗ್ ಲಾರಿ ಪುತ್ತೂರು ಕಡೆಯಿಂದ ಮಂಗಳೂರಿಗೆ ತೆರಳುತ್ತಿದ್ದಾಗ ಚಾಲಕನ ನಿಯಂತ್ರಣ ಕಳೆದು ಕೊಡಾಜೆ ಜಂಕ್ಷನ್ ನಲ್ಲಿ ನಂದಿನಿ ಹಾಲಿನ ಅಂಗಡಿ, ಬೇಕರಿ, ಬಸ್ ತಂಗುದಾಣ, ಮೊಬೈಲ್ ಅಂಗಡಿ ಮಹಡಿಗೆ, ಡಿಕ್ಕಿ ಹೊಡೆದು ಹೋಟೆಲ್ ಗೆ ನುಗ್ಗಿದೆ.


ಘಟನೆಯಿಂದ ಚಾಲಕ ಗಂಭೀರ ಗಾಯಗೊಂಡಿದ್ದು, ತಕ್ಷಣವೇ ಆತನನ್ನು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಶಿರಸಿ ಮೂಲದ ಲಾರಿ ಎನ್ನಲಾಗಿದೆ. ರಾತ್ರಿ 1 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ಜನ ಸಂಚಾರವಿಲ್ಲದ್ದರಿಂದ ಭಾರೀ ಅನಾಹುತ ತಪ್ಪಿದೆ. ಘಟನೆಯಿಂದ ಅಂಗಡಿಗಳಿಗೆ ಭಾರೀ ಹಾನಿ ಸಂಭವಿಸಿದೆ.

- Advertisement -

Latest News

error: Content is protected !!