Sunday, June 7, 2026
Homeಕ್ರೀಡೆಪ್ಯಾರಾಒಲಿಂಪಿಕ್ಸ್ ನಲ್ಲಿ ಭಾರತಕ್ಕೆ ಮತ್ತೊಂದು ಪದಕ: ಬೆಳ್ಳಿ ಗೆದ್ದ ನಿಶಾದ್ ಕುಮಾರ್

ಪ್ಯಾರಾಒಲಿಂಪಿಕ್ಸ್ ನಲ್ಲಿ ಭಾರತಕ್ಕೆ ಮತ್ತೊಂದು ಪದಕ: ಬೆಳ್ಳಿ ಗೆದ್ದ ನಿಶಾದ್ ಕುಮಾರ್

- Advertisement -
- Advertisement -

ಟೋಕಿಯೊದಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ ಕ್ರೀಡಾಕೂಟದಲ್ಲಿ ಭಾರತದ ನಿಶಾದ್ ಕುಮಾರ್ ಅದ್ಭುತ ಪ್ರದರ್ಶನ ನೀಡುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ. ಎತ್ತರ ಜಿಗಿತದಲ್ಲಿ ಬೆಳ್ಳಿ ಪದಕ ಗೆದ್ದಿದ್ದು, ಅವರು ಅಮೆರಿಕಾದ 2 ಕ್ರೀಡಾಪಟುಗಳೊಂದಿಗೆ ಸ್ಪರ್ಧಿಸಿದರು.

2.06 ಮೀಟರ್ ಗಳಷ್ಟು ಜಿಗಿಯುವ ಮೂಲಕ ನಿಶಾದ್ ಕುಮಾರ್ ತಮ್ಮದೇ ಏಷ್ಯನ್ ದಾಖಲೆಯನ್ನು ಸರಿಗಟ್ಟಿದ್ದಾರೆ. ಇದೇ ಸ್ಪರ್ಧೆಯಲ್ಲಿ ಭಾಗಿಯಾಗಿದ್ದ ಭಾರತದ ಮತ್ತೋರ್ವ ಕ್ರೀಡಾಪಟು ರಾಮ್ ಪಾಲ್ 5 ನೇ ಸ್ಥಾನ ಪಡೆದಿದ್ದು, 1.94 ಮೀಟರ್ ಜಿಗಿದಿದ್ದಾರೆ. ಅಮೆರಿಕಾದ ಡಲ್ಲಾಸ್ ವೈಸ್ (ಟಿ46) 2.06 ಮೀಟರ್ (ನಿಶಾದ್ ಕುಮಾರ್ ಅವರ ಸಮ) ಜಿಗಿದಿದ್ದು ರಜತ ಪದಕವನ್ನು ಭಾರತೀಯ ಕ್ರೀಡಾಪಟುವಿನೊಂದಿಗೆ ಹಂಚಿಕೊಂಡಿದ್ದಾರೆ.

ಟೋಕಿಯೊ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಬೆಳ್ಳಿ ಪದಕ ಗೆದ್ದ ನಿಶಾದ್ ಕುಮಾರ್ ಹಿಮಾಚಲ ಪ್ರದೇಶದ ಉನಾ ಮೂಲದವರು. ಪ್ಯಾರಾಲಿಂಪಿಕ್ ಕ್ರೀಡಾಕೂಟ ಆರಂಭವಾಗುವ ಮುನ್ನ ಬೆಂಗಳೂರಿನ ಕೋಚಿಂಗ್ ಕ್ಯಾಂಪ್ʼನಲ್ಲಿ ತಿಂಗಳುಗಟ್ಟಲೆ ಶ್ರಮ ಪಟ್ಟಿದ್ದಾರೆ.

- Advertisement -

Latest News

error: Content is protected !!