Saturday, June 29, 2024
Homeಕರಾವಳಿಉಪ್ಪಿನಂಗಡಿಯಲ್ಲಿ ಹೊನಲು ಬೆಳಕಿನ ವಿಜಯ- ವಿಕ್ರಮ ಜೋಡುಕರೆ ಕಂಬಳ

ಉಪ್ಪಿನಂಗಡಿಯಲ್ಲಿ ಹೊನಲು ಬೆಳಕಿನ ವಿಜಯ- ವಿಕ್ರಮ ಜೋಡುಕರೆ ಕಂಬಳ

spot_img
- Advertisement -
- Advertisement -

ಉಪ್ಪಿನಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಕೂಟೇಲು ನೇತ್ರಾವತಿ ನದಿ ಕಿನಾರೆಯಲ್ಲಿ ನಡೆಯುವ 36ನೇ ವರ್ಷದ ಹೊನಲು ಬೆಳಕಿನ ವಿಜಯ- ವಿಕ್ರಮ ಜೋಡುಕರೆ ಕಂಬಳ ನಾಳೆ ನಡೆಯಲಿದೆ.


ಕಂಬಳವನ್ನು ಅದ್ಧೂರಿಯಾಗಿ ನಡೆಸಲು ಎಲ್ಲಾ ಸಿದ್ಧತೆಗಳನ್ನು ಈಗಾಗಲೇ ಮಾಡಿಕೊಳ್ಳಲಾಗಿದೆ.ಸುಮಾರು 170ರಷ್ಟು ಜೋಡಿ ಕೋಣಗಳು ಭಾಗವಹಿಸುವ ನಿರೀಕ್ಷೆ ಇದೆ.ನಾಳೆ ಬೆಳಿಗ್ಗೆ ಉಪ್ಪಿನಂಗಡಿಯ ಸಹಸ್ರಲಿಂಗೇಶ್ವರ ದೇವಳದಲ್ಲಿ ಪ್ರಾರ್ಥನೆ ಸಲ್ಲಿಸಿ ಅಲ್ಲಿಂದ ಕೋಣಗಳು, ಕೋಣಗಳ ಯಜಮಾನರ ಸಹಿತ ಬ್ಯಾಂಡ್ ವಾಲಗ, ಗೊಂಬೆ ಕುಣಿತಗಳೊಂದಿಗೆ ಕಂಬಳ ಗದ್ದೆಯ ತನಕ ಆಕರ್ಷಕ ಮೆರವಣಿಗೆ ನಡೆಯಲಿದೆ.


ಬಳಿಕ 9.32ಕ್ಕೆ ಕಂಬಳದ ಉದ್ಘಾಟನೆ ನಡೆಯಲಿದೆ. ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕರುಣಾಕರ ಸುವರ್ಣ ಅವರು ಉದ್ಘಾಟಿಸಲಿದ್ದಾರೆ.

- Advertisement -
spot_img

Latest News

error: Content is protected !!