Saturday, June 6, 2026
Homeತಾಜಾ ಸುದ್ದಿನಾಳೆ ಸಿಎಂ ದೆಹಲಿ ಪ್ರವಾಸ : ಸಂಪುಟ ವಿಸ್ತರಣೆಗೆ ಸಿಗುತ್ತಾ ಗ್ರೀನ್ ಸಿಗ್ನಲ್

ನಾಳೆ ಸಿಎಂ ದೆಹಲಿ ಪ್ರವಾಸ : ಸಂಪುಟ ವಿಸ್ತರಣೆಗೆ ಸಿಗುತ್ತಾ ಗ್ರೀನ್ ಸಿಗ್ನಲ್

- Advertisement -
- Advertisement -

ಬೆಂಗಳೂರು ಸಿಎಂ ಬಸವರಾಜ್ ಬೊಮ್ಮಾಯಿ  ಮೇ. 10 (ನಾಳೆ)  ದೆಹಲಿ ಪ್ರವಾಸ ಕೈಗೊಳ್ಳಲಿದ್ದು , ಸಚಿವ ಸಂಪುಟ ವಿಸ್ತರಣೆ ಅಥವಾ ಸಂಪುಟ ಪುನಾರಚನೆ ಕುರಿತಂತೆ ಬಿಜೆಪಿ ವರಿಷ್ಠರೊಂದಿಗೆ ಚರ್ಚೆ ನಡೆಸುವ ಸಾಧ್ಯತೆ ಇದೆ .

ರಾಜ್ಯದಲ್ಲಿ ನಡೆಯಲಿರುವ ಬಂಡವಾಳ ಹೂಡಿಕೆದಾರರ ಸಮಾವೇಶ ಇನ್ವೆಸ್ಟ್‌ ಕರ್ನಾಟಕ ಕಾರ್ಯಕ್ರಮದ ಹಿನ್ನೆಲೆಯಲ್ಲಿ ದೆಹಲಿಯಲ್ಲಿರುವ ವಿವಿಧ ದೇಶಗಳ ರಾಯಭಾರಿಗಳು ಮತ್ತು ಹೈಕಮಿಷನರ್‌ಗಳ ಜತೆಗೆ ಸಮಾಲೋಚನೆ ನಡೆಸಲು ಸಿಎಂ ಬೊಮ್ಮಾಯಿ ದೆಹಲಿಗೆ ತೆರಳಲಿದ್ದಾರೆ.ಸಿಎಂ ಬೊಮ್ಮಾಯಿ ನಾಳೆ ದೆಹಲಿಗೆ ಪ್ರಯಾಣ ಬೆಳಸಲಿದ್ದು,ಇದೇ ವೇಳೆ ದೆಹಲಿಯಲ್ಲಿ ಬಿಜೆಪಿ ವರಿಷ್ಠರನ್ನು ಭೇಟಿಯಾಗಿ ಸಚಿವ ಸಂಪುಟ ವಿಸ್ತರಣೆ ಅಥವಾ ಸಂಪುಟ ಪುನಾಚರಣೆ ಕುರಿತು ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ. ಸಿಎಂ ಬೊಮ್ಮಾಯಿ ದೆಹಲಿ ಭೇಟಿ ತೀವ್ರ ಕುತೂಹಲ ಮೂಡಿಸಿದೆ.

- Advertisement -

Latest News

error: Content is protected !!