Monday, May 6, 2024
Homeಕರಾವಳಿನಾಳೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿ

ನಾಳೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿ

spot_img
- Advertisement -
- Advertisement -

ಮಂಗಳೂರು; ರಾಜ್ಯ ವಿಧಾನಸಭಾ ಚುನಾವಣೆಯ  ಫಲಿತಾಂಶ ಹಿನ್ನೆಲೆ ದಕ್ಷಿಣಜಿಲ್ಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮೇ 13ರ ಬೆಳಗ್ಗೆ 5 ಗಂಟೆಯಿಂದ ಮಧ್ಯರಾತ್ರಿ 12 ಗಂಟೆವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ದ.ಕ ಜಿಲ್ಲಾಧಿಕಾರಿ ರವಿಕುಮಾರ್ ನಿಷೇಧಾಜ್ಞೆ ಜಾರಿಗೊಳಿಸಿದ್ದು, ನಿಷೇಧಾಜ್ಞೆ ವೇಳೆ ಮತ ಎಣಿಕೆ ಕೇಂದ್ರ ಸೇರಿದಂತೆ ಜಿಲ್ಲೆಯಾದ್ಯಂತ ವಿಜಯೋತ್ಸವ ಮಾಡುವುದು, ಮೆರವಣಿಗೆ ನಡೆಸುವುದನ್ನು ನಿಷೇಧಿಸಲಾಗಿದೆ.

ನಿಷೇಧಾಜ್ಞೆ ವೇಳೆ ಸಾರ್ವಜನಿಕವಾಗಿ ಐದಕ್ಕಿಂತ ಹೆಚ್ಚು ಮಂದಿ ಗುಂಪು ಸೇರುವುದು,ಸಾರ್ವಜನಿಕವಾಗಿ ಆಯುಧಗಳನ್ನು ತೆಗೆದುಕೊಂಡು ಹೋಗುವುದು, ಸಾರ್ವಜನಿಕ ಸಮಾರಂಭ ಪ್ರತಿಭಟನೆಗೆ ಅವಕಾಶ ನಿರಾಕರಿಸಲಾಗಿದೆ.

ಶವ ಸಂಸ್ಕಾರ, ಮದುವೆ ಅಥವಾ ಧಾರ್ಮಿಕ ಮೆರವಣಿಗೆಗಳಿಗೆ ಹಾಗೂ ಕೋವಿಡ್ 19 ಕಾರ್ಯಗಳಿಗೆ ಈ ಆದೇಶ ಅನ್ವಯಿಸುವುದಿಲ್ಲ.ದ.ಕ ಜಿಲ್ಲಾ ವ್ಯಾಪ್ತಿಯ 8 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಪ್ರಕ್ರಿಯೆ ಸುರತ್ಕಲ್ ನ ಎನ್‌ಐಟಿಕೆಯಲ್ಲಿ‌ ನಡೆಯಲಿದೆ. ಇದಕ್ಕೆ ಸಿದ್ಧತೆ ಪೂರ್ಣಗೊಂಡಿದೆ.

- Advertisement -
spot_img

Latest News

error: Content is protected !!