- Advertisement -
- Advertisement -
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾನುವಾರ ಕೂಡಾ ಸಾರ್ವಜನಿಕ ಓಡಾಟ ನಿರ್ಬಂಧಿಸಿ, ಎಲ್ಲಾ ಚಟುವಟಿಕೆ, ವಾಣಿಜ್ಯ, ವ್ಯವಹಾರಗಳನ್ನು ಅಂಗಡಿ ಮುಂಗಟ್ಟುಗಳನ್ನು ಸಂಪೂರ್ಣವಾಗಿ ಬಂದ್ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಕಚೇರಿಯ ಪ್ರಕಟಣೆ ತಿಳಿಸಿದೆ.
ಶುಕ್ರವಾರದಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಸಂಪೂರ್ಣ ಬಂದ್ ಮಾಡುವ ನಿರ್ಧಾರ ಕೈಗೊಳ್ಳಲಾಗಿತ್ತು. ಶನಿವಾರದಂದು ಸಂಪೂರ್ಣ ಬಂದ್ ಮಾಡಲಾಗಿತ್ತಾದರೂ ಅನಗತ್ಯ ಮನೆಯಿಂದ ಹೊರ ಬಂದವರನ್ನು ಪೊಲೀಸರು ತರಾಟೆಗೆ ತೆಗೆದುಕೊಂಡಿದ್ದರು. ಭಾನುವಾರ ಕೂಡಾ ಬಂದ್ ಮುಂದುವರಿಯಲಿದ್ದು, ಆಸ್ಪತ್ರೆ, ಹಾಲು ಮಾರಾಟಕ್ಕೆ ಮತ್ತು ಪತ್ರಿಕೆ ವಿತರಣೆಗೆ ಬೆಳಗ್ಗೆ ಕೆಲಕಾಲ ಅವಕಾಶ ಕಲ್ಪಿಸಲಾಗಿದೆ.
- Advertisement -