Wednesday, June 24, 2026
Homeತಾಜಾ ಸುದ್ದಿನಿವೃತ್ತ ಪೊಲೀಸ್ ಅಧಿಕಾರಿ ಭಾಸ್ಕರ್ ರಾವ್ ನಾಳೆ ಎಎಪಿಗೆ ಸೇರ್ಪಡೆ

ನಿವೃತ್ತ ಪೊಲೀಸ್ ಅಧಿಕಾರಿ ಭಾಸ್ಕರ್ ರಾವ್ ನಾಳೆ ಎಎಪಿಗೆ ಸೇರ್ಪಡೆ

- Advertisement -
- Advertisement -

ಬೆಂಗಳೂರು: ಮೊನ್ನೆ ತಾನೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ನಿವೃತ್ತ ಪೊಲೀಸ್ ಅಧಿಕಾರಿ ಭಾಸ್ಕರ್ ರಾವ್ ಸೋಮವಾರ (ಏಪ್ರಿಲ್ 4) ಬೆಳಗ್ಗೆ 11 ಗಂಟೆಗೆ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದಾರೆ. ನಾಳೆ ಬೆಳಗ್ಗೆ 11 ಗಂಟೆಗೆ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದಾರೆ. ದೆಹಲಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ಸಮ್ಮುಖದಲ್ಲಿ ಆಪ್​ಗೆ ಸೇರ್ಪಡೆ ಆಗಲಿದ್ದಾರೆ. ಆಪ್ ಸೇರ್ಪಡೆ ಬಳಿಕ ಭಾಸ್ಕರ್ ರಾವ್ ಸುದ್ದಿಗೋಷ್ಠಿ ನಡೆಸಲಿದ್ದು, ನಾಳೆ ಮಧ್ಯಾಹ್ನ 1 ಗಂಟೆಗೆ ಭಾಸ್ಕರ್ ರಾವ್ ಸುದ್ದಿಗೋಷ್ಠಿ ನಡೆಸಲಿದ್ದಾರೆ ಎನ್ನಲಾಗಿದೆ.

ಅರ್ಥಶಾಸ್ತ್ರ ವಿಷಯದಲ್ಲಿ ಎಂ.ಎ ಪದವಿ ಪಡೆದಿರುವ ಭಾಸ್ಕರ್ ರಾವ್, 1990 ನೇ ಕರ್ನಾಟಕ ಕೇಡರ್​ ಐಪಿಎಸ್​ ಅಧಿಕಾರಿ ಆಗಿದ್ದಾರೆ. ಬೆಂಗಳೂರು ಪೊಲೀಸ್ ಕಮಿಷನರ್ ಆಗಿಯೂ ಅವರು ಕೆಲಸ ಮಾಡಿದ್ದಾರೆ. ರೈಲ್ವೇ ಪೊಲೀಸ್ ವಿಭಾಗದ ಎಡಿಜಿಪಿ ಆಗಿಯೂ ಕಾರ್ಯ ನಿರ್ವಹಿಸಿದ್ದಾರೆ.

- Advertisement -

Latest News

error: Content is protected !!