Saturday, May 18, 2024
Homeತಾಜಾ ಸುದ್ದಿಮಾಜಿ ಐಪಿಎಸ್ ಅಧಿಕಾರಿ ಹಾಗೂ ಆಪ್ ರಾಜ್ಯ ಉಪಾಧ್ಯಕ್ಷ ಭಾಸ್ಕರ್ ರಾವ್ ನಾಳೆ ಬಿಜೆಪಿ ಸೇರ್ಪಡೆ...

ಮಾಜಿ ಐಪಿಎಸ್ ಅಧಿಕಾರಿ ಹಾಗೂ ಆಪ್ ರಾಜ್ಯ ಉಪಾಧ್ಯಕ್ಷ ಭಾಸ್ಕರ್ ರಾವ್ ನಾಳೆ ಬಿಜೆಪಿ ಸೇರ್ಪಡೆ ಸಾಧ್ಯತೆ

spot_img
- Advertisement -
- Advertisement -

ಬೆಂಗಳೂರು : ಮಾಜಿ ಐಪಿಎಸ್ ಅಧಿಕಾರಿ ಹಾಗೂ ಆಮ್ ಆದ್ಮಿ ಪಕ್ಷದ ರಾಜ್ಯ ಉಪಾಧ್ಯಕ್ಷ ಭಾಸ್ಕರ್ ರಾವ್ ನಾಳೆ ಬೆಳಗ್ಗೆ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎನ್ನಲಾಗುತ್ತಿದೆ.ನಾಳೆ ಬೆಳಗ್ಗೆ 9 ಗಂಟೆಗೆ ಬಿಜೆಪಿ ಪಕ್ಷದ ಕಚೇರಿಯಲ್ಲಿ ವರಿಷ್ಟರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಇಂದು ಭಾಸ್ಕರ್ ರಾವ್ ಅವರು  ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಸಚಿವ ಆರ್. ಅಶೋಕ್, ರಾಜ್ಯ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನಾ ಮತ್ತು ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಭೇಟಿ ಅವರನ್ನು ಭೇಟಿ ಮಾಡಿದ್ದರು. ಅಲ್ಲದೇ ರಾಜ್ಯ ಚುನಾವಣಾ ಸಹ ಉಸ್ತುವಾರಿ ಅಣ್ಣಾಮಲೈ ಅವರನ್ನು ಕೂಡಾ ಭೇಟಿ ಮಾಡಿದ್ದಾರೆ. ಇದೀಗ ನಾಳೆ ಬಿಜೆಪಿ ಸೇರುತ್ತಾರೆ ಅಂತಾ ಹೇಳಲಾಗಿದೆ

- Advertisement -
spot_img

Latest News

error: Content is protected !!