ಮಂಗಳೂರು: ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಲು ಮೇ 25 ಮತ್ತು 26 ರಂದು ರಾಜ್ಯಪಾಲರು, ಮುಖ್ಯಮಂತ್ರಿಗಳು ಸೇರಿದಂತೆ ಹಲವಾರು ಪ್ರಮುಖ ಗಣ್ಯರು ಮಂಗಳೂರು ನಗರಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ನಗರ ಪ್ರದೇಶದಲ್ಲಿ ವಾಹನ ದಟ್ಟಣೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ವಾಹನ ನಗರ ಪ್ರದೇಶದ ವಾಹನ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ.
ಶನಿವಾರ ಎಂ.ಜಿ ರಸ್ತೆಯಲ್ಲಿನ ಟಿ.ಎಂ.ಎ.ಪೈ ಹಾಲ್‌ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯಪಾಲರು ಸೇರಿದಂತೆ ಹಲವಾರು ಗಣ್ಯರು ಭಾಗವಹಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ವಾಹನ ದಟ್ಟಣೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ನಗರ ಪ್ರದೇಶದಲ್ಲಿನ ವಾಹನ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ.
ವಾಹನ ದಟ್ಟಣೆ ಹೆಚ್ಚಾಗುವ ಸಾಧ್ಯತೆಗಳಿರುವ ಸ್ಥಳಗಳು:
ಕೊಟ್ಟಾರ ಚೌಕಿ, ಕುಂಟಿಕಾನ, ಕೆ.ಪಿ.ಟಿ, ನಂತೂರು, ಕೆ.ಎಸ್.ಆರ್.ಟಿ.ಸಿ., ಬಂಟ್ಸ್ ಹಾಸ್ಟೆಲ್, ಡಾ. ಅಂಬೇಡ್ಕರ್ ಸರ್ಕಲ್, ಹಾರ್ಟಿಕಲ್ಚರ್ ಜಂಕ್ಷನ್, ಬಲ್ಮಠ, ಹಂಪನಕಟ್ಟೆ, ಕರಾವಳಿ ಸರ್ಕಲ್, ಕಂಕನಾಡಿ, ಪಂಪ್‌ವೆಲ್, ತೊಕ್ಕೊಟ್ಟ
ಪರ್ಯಾಯ ಸಂಚಾರ ವ್ಯವಸ್ಥೆ ಈ ಕೆಳಗಿನಂತಿದೆ:
1. ಹಂಪನಕಟ್ಟೆಯಿಂದ ಬಂಟ್ಸ್ ಹಾಸ್ಟೆಲ್ ಮುಖಾಂತರ ಲೇಡಿಹಿಲ್‌ಗೆ ಹೋಗುವ ಎಲ್ಲಾ ವಾಹನಗಳು ಕರಂಗಲಪಾಡಿ ಅಥವಾ ಭಾರತ್‌ಬೀಡಿ ಜಂಕ್ಷನ್ ಮುಖಾಂತರ ಚಲಿಸುವುದು.
2. ಪಿ.ವಿ.ಎಸ್ ಜಂಕ್ಷನ್‌ನಿಂದ ಲೇಡಿಹಿಲ್ ಸರ್ಕಲ್‌ವರೆಗಿನ ಎಂ.ಜಿ. ರಸ್ತೆಗೆ ಬಂದು ಸೇರುವ ಎಲ್ಲಾ ಕೂಡು ರಸ್ತೆಗಳನ್ನು ಉಪಯೋಗಿಸುವ ವಾಹನ ಸವಾರರು ಬಿಜೈ ಚರ್ಚ್ ರೋಡ್ / ಕುದ್ರೋಳಿ ರಸ್ತೆಯನ್ನು ಉಪಯೋಗಿಸುವುದು.
ಬಸ್ಸುಗಳ ಸಂಚಾರಕ್ಕೆ ನಿಗದಿಪಡಿಸಿದ ರಸ್ತೆಗಳು:
1. ಕೆ.ಎಸ್.ರಾವ್ ರಸ್ತೆ, ಎಂ.ಜಿ. ರಸ್ತೆ, ಬಂಟ್ಸ್ ಹಾಸ್ಟೆಲ್ ಮುಖಾಂತರ ಸಂಚರಿಸುವ ಎಲ್ಲಾ ಸಿಟಿ ಬಸ್ಸುಗಳು, ಎಕ್ಸ್‌ಪ್ರೆಸ್ ಬಸ್ಸುಗಳು ಹಾಗೂ KSRTC ಬಸ್ಸುಗಳು ಹಂಪನಕಟ್ಟ, ಡಾ.ಅಂಬೇಡ್ಕರ್ ವೃತ್ತ, ಬಲ್ಮಠ, ಹಾರ್ಟಿಕಲ್ಚರ್ ಜಂಕ್ಷನ್, ಕದ್ರಿ ಜಂಕ್ಷನ್, ನಂತೂರು ಮುಖಾಂತರ ಸಂಚರಿಸಲು ಸೂಚಿಸಿದೆ.
2. ಕೊಟ್ಟಾರಚೌಕಿ ಮುಖಾಂತರ ಸ್ಟೇಟ್‌ಬ್ಯಾಂಕ್ ಕಡೆಗೆ ಬರುವ ಎಲ್ಲಾ ಸಿಟಿ ಬಸ್ಸುಗಳು, ಎಕ್ಸ್‌ಪ್ರೆಸ್ ಬಸ್ಸುಗಳು ಹಾಗೂ KSRTC ಬಸ್ಸುಗಳು ನಂತೂರು ಮುಖಾಂತರ ಸಂಚರಿಸಲು ಸೂಚಿಸಿದೆ.
3. KSRTC ಬಸ್ಸ್ ನಿಲ್ದಾಣದಿಂದ ಹೊರಹೋಗುವ ಹಾಗೂ ಒಳಬರುವ ಎಲ್ಲಾ ಬಸ್ಸುಗಳು ರಾಷ್ಟ್ರೀಯ ಹೆದ್ದಾರಿಯ ಕುಂಟಿಕಾನ ಜಂಕ್ಷನ್ ಮೂಲಕ ಒಳ ಬರಲು ಹಾಗೂ ಹೊರ ಹೋಗಲು ಸೂಚಿಸಿದೆ.
ವಾಹನ ಪಾರ್ಕಿಂಗ್ ನಿಷೇಧಿತ ಸ್ಥಳಗಳು:
ಪಿ.ವಿ.ಎಸ್ ಜಂಕ್ಷನ್‌ನಿಂದ ಲಾಲ್‌ಭಾಗ್ ಜಂಕ್ಷನ್‌ವರೆಗಿನ ಎಂ.ಜಿ ರಸ್ತೆಯಲ್ಲಿ, PVS ಜಂಕ್ಷನ್ ನಿಂದ ಬಂಟ್ಸ್ ಹಾಸ್ಟೆಲ್ ಜಂಕ್ಷನ್‌ವರೆಗೆ ಹಾಗೂ ಲಾಲ್‌ಬಾಗ್ ಜಂಕ್ಷನ್‌ನಿಂದ ಕೆ.ಪಿ.ಟಿ ಜಂಕ್ಷನ್‌ವರೆಗಿನ ರಸ್ತೆಯ ಎರಡೂ ಬದಿಯಲ್ಲಿ ವಾಹನ ನಿಲುಗಡೆಯನ್ನು ನಿಷೇಧಿಸಲಾಗಿದೆ
ನಾಳೆ ಸಂಜೆ ಧರ್ಮಸ್ಥಳಕ್ಕೆ ಭೇಟಿ ನೀಡಲಿರುವ ಸಿಎಂ ಸಿದ್ದರಾಮಯ್ಯ
ಇನ್ನು ನಾಳೆ ಸಂಜೆ ಸಿಎಂ ಸಿದ್ದರಾಮಯ್ಯ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಲಿದ್ದಾರೆ. ದರ್ಶನದ ಬಳಿಕ ಮತ್ತೆ ಮಂಗಳೂರಿಗೆ ತೆರಳಲಿದ್ದಾರೆ.