Thursday, June 4, 2026
Homeಕರಾವಳಿಬೆಳ್ತಂಗಡಿ: ನಾಳೆ ಉಜಿರೆಗೆ ಆಗಮಿಸಲಿರುವ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್; ರಕ್ಷಿತ್ ಶಿವರಾಂ ಪರ...

ಬೆಳ್ತಂಗಡಿ: ನಾಳೆ ಉಜಿರೆಗೆ ಆಗಮಿಸಲಿರುವ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್; ರಕ್ಷಿತ್ ಶಿವರಾಂ ಪರ ಪ್ರಚಾರ

- Advertisement -
- Advertisement -

ಬೆಳ್ತಂಗಡಿ: ಚುನಾವಣಾ ಪ್ರಚಾರ ಹಿನ್ನಲೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಡಿ.ಕೆ ಶಿವಕುಮಾರ್ ಏ.22ರಂದು ಉಜಿರೆಗೆ ಆಗಮಿಸಲಿದ್ದಾರೆ.

ಏ.22 ರಂದು ಬೆಳಗ್ಗೆ 9 ಗಂಟೆಗೆ ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಹೊರಟು 10ಗಂಟೆಗೆ ಧರ್ಮಸ್ಥಳಕ್ಕೆ ತಲುಪಿ ಬಳಿಕ ಉಜಿರೆಯ ಶ್ರೀ ಕೃಷ್ಣಾನುಗ್ರಹ ಸಭಾಂಗಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಪರ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಈ ಕಾರ್ಯಕ್ರಮದಲ್ಲಿ ಕೆ.ಪಿ.ಸಿ.ಸಿ ಮಾಧ್ಯಮ ವಕ್ತಾರ ಹಾಗೂ ಕೊಪ್ಪ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷರಾದ ನ್ಯಾಯವಾದಿ ಸುಧೀರ್ ಕುಮಾರ್, ಮರೊಳ್ಳಿಯವರು ಪ್ರಧಾನ ಭಾಷಣ ಮಾಡಲಿದ್ದಾರೆ. ಎ.ಐ.ಸಿ.ಸಿ ವೀಕ್ಷಕರಾದ ಶಾಸಕ ಸಂಜೀವ್ ಜೋಸೆಫ್ , ಜಿಲ್ಲಾ ಕಾಂಗ್ರೇಸ್ ಅಧ್ಯಕ್ಷರು, ವಿಧಾನ ಪರಿಷತ್ ಶಾಸಕರಾದ ಕೆ. ಹರೀಶ್ ಕುಮಾರ್, ಮಾಜಿ ಶಾಸಕರಾದ ಕೆ. ವಸಂತ ಬಂಗೇರ, ಮಾಜಿ ಸಚಿವರಾದ ಕೆ. ಗಂಗಾಧರ ಗೌಡ, ಕೆ. ಪಿ. ಸಿ. ಸಿ ಸಂಯೋಜಕರಾದ ಶಾಹಿದ್ ತೆಕ್ಕಿಲ್ ಮತ್ತು ಜಿಲ್ಲಾ ಮಟ್ಟದ ಪಕ್ಷದ ನಾಯಕರುಗಳು ಭಾಗವಹಿಸಲಿದ್ದಾರೆ.

- Advertisement -

Latest News

error: Content is protected !!