Saturday, May 18, 2024
Homeಕರಾವಳಿದಕ್ಷಿಣ ಕನ್ನಡ ಜಿಲ್ಲಾಧಿಕಾರಿ ನಾಳೆ ಬೆಳ್ತಂಗಡಿ ತಾಲೂಕು ಕಚೇರಿ ಭೇಟಿ:  ಪ್ರತಿತಿಂಗಳು ದ.ಕ ಜಿಲ್ಲಾಧಿಕಾರಿ ತಾಲೂಕು...

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ನಾಳೆ ಬೆಳ್ತಂಗಡಿ ತಾಲೂಕು ಕಚೇರಿ ಭೇಟಿ:  ಪ್ರತಿತಿಂಗಳು ದ.ಕ ಜಿಲ್ಲಾಧಿಕಾರಿ ತಾಲೂಕು ಕಚೇರಿಗೆ ಬಂದು ಅಹವಾಲು ಸ್ವೀಕಾರ

spot_img
- Advertisement -
- Advertisement -

ಬೆಳ್ತಂಗಡಿ : ಜಿಲ್ಲಾಧಿಕಾರಿ ಕಚೇರಿಗೆ ತಾಲೂಕು ಕಚೇರಿಯಿಂದ ಸುಮಾರು 80 ರಿಂದ 120 ಕಿ.ಮೀ ದೂರವಿದ್ದು , ವಯೋವೃದ್ದರು, ವಿಕಲಚೇತನರು ಹಾಗೂ ಮಹಿಳೆಯರು ಜಿಲ್ಲಾಧಿಕಾರಿ ಕಚೇರಿಗೆ ಅರ್ಜಿ ನೀಡುವುದಕ್ಕೆ ತೊಂದರೆಯಾಗುತ್ತಿದೆ. ಈ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು ತಾಲೂಕು ಕಚೇರಿಗೆ ತೆರಳಿದಲ್ಲಿ ಜನರಿಗೆ ನಿರ್ದಿಷ್ಟ ಸಮಯದಲ್ಲಿ ಖುದ್ದು ಜಿಲ್ಲಾಧಿಕಾರಿಯವರನ್ನು ಭೇಟಿ‌ ಮಾಡಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಮತ್ತು ಅವಹಾಲುಗಳನ್ನು ಸಲ್ಲಿಸಲು ಸಹಾಯವಾಗುವುದರಿಂದ ಪ್ರತಿತಿಂಗಳ ಎಲ್ಲಾ ಮಂಗಳವಾರದಂದು ಪೂರ್ವಾಹ್ನ 11 ರಿಂದ ಅಪರಾಹ್ನ 2 ಗಂಟೆಯವರೆಗೆ ತಾಲೂಕು ಕಚೇರಿಗೆ ಭೇಟಿ ನೀಡಲಿದ್ದಾರೆ.

ದಿನಾಂಕ 28/06/2022 ರಂದು ಮಂಗಳವಾರ ಬೆಳ್ತಂಗಡಿ ತಾಲೂಕು ಕಚೇರಿಯ ಸಭಾಂಗಣದಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರಾಜೇಂದ್ರ.ಕೆ.ವಿ ಭೇಟಿ ನೀಡಲಿದ್ದು ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಮಾಹಿತಿಗಳನ್ನು ಸಾರ್ವಜನಿಕರಿಂದ ಪಡೆಯಲಿದ್ದಾರೆ

- Advertisement -
spot_img

Latest News

error: Content is protected !!