Sunday, May 12, 2024
Homeಕರಾವಳಿಉಡುಪಿನಾಳೆ ಹಿಜಾಬ್ ತೀರ್ಪು ಪ್ರಕಟ ಹಿನ್ನೆಲೆ; ದ.ಕ., ಉಡುಪಿ ಜಿಲ್ಲೆಯ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

ನಾಳೆ ಹಿಜಾಬ್ ತೀರ್ಪು ಪ್ರಕಟ ಹಿನ್ನೆಲೆ; ದ.ಕ., ಉಡುಪಿ ಜಿಲ್ಲೆಯ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

spot_img
- Advertisement -
- Advertisement -

ಮಂಗಳೂರು; ನಾಳೆ ಹಿಜಾಬ್ ಕುರಿತಾದ ಹೈಕೋರ್ಟ್ ತೀರ್ಪು ಹೊರ ಬೀಳಲಿದೆ. ಈ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ದ.ಕ., ಉಡುಪಿ ಜಿಲ್ಲೆಯ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ ಎಂದು ದ.ಕ.ಜಿಲ್ಲಾಧಿಕಾರಿ ಕೆ.ವಿ. ರಾಜೇಂದ್ರ ತಿಳಿಸಿದ್ದಾರೆ.

ಸರಕಾರಿ, ಖಾಸಗಿ ಸಹಿತ ಎಲ್ಲಾ ಪ್ರಾಥಮಿಕ, ಪೂರ್ವ ಪ್ರಾಥಮಿಕ ಮತ್ತು ಅಂಗನವಾಡಿಗಳಿಗೂ ಕೂಡ ಈ ರಜೆ ಅನ್ವಯವಾಗಲಿದೆ. ಅಲ್ಲದೆ ಮುಂಜಾಗರೂಕತಾ ಕ್ರಮವಾಗಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ. ಇನ್ನು ಉಡುಪಿಯಲ್ಲೂ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮ ರಾವ್ ಹೇಳಿದ್ದಾರೆ.

- Advertisement -
spot_img

Latest News

error: Content is protected !!