Wednesday, June 26, 2024
Homeತಾಜಾ ಸುದ್ದಿಮಂಕಿಪಾಕ್ಸ್ ತಡೆಗೆ ನಾಳೆ ಸಭೆ ಉನ್ನತಮಟ್ಟದ ಸಭೆ: ಸಿಎಂ ಬಸವರಾಜ ಬೊಮ್ಮಾಯಿ

ಮಂಕಿಪಾಕ್ಸ್ ತಡೆಗೆ ನಾಳೆ ಸಭೆ ಉನ್ನತಮಟ್ಟದ ಸಭೆ: ಸಿಎಂ ಬಸವರಾಜ ಬೊಮ್ಮಾಯಿ

spot_img
- Advertisement -
- Advertisement -

ಬೆಂಗಳೂರು: ಮಂಕಿಪಾಕ್ಸ್ ಮುನ್ನೆಚ್ಚರಿಕೆ ಹಿನ್ನೆಲೆ ಕರ್ನಾಟಕದಲ್ಲಿ ಹೈ ಅಲರ್ಟ್ ಮಾಡಲಾಗಿದೆ. ಸೋಂಕು ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರಿಗೆ ಆರೋಗ್ಯ ತಪಾಸಣೆ ಮಾಡಲಾಗುತ್ತದೆ. ಬೆಂಗಳೂರು, ಮಂಗಳೂರು ಏರ್ ಪೋರ್ಟ್ಗಳಲ್ಲಿ ಅಧಿಕಾರಿಗಳು ಅಲರ್ಟ್ ಆಗಿದ್ದಾರೆ. ಶೀತ- ಜ್ವರ, ತಲೆನೋವು, ಸ್ನಾಯು ಸೆಳೆತ, ಆಯಾಸ, ಗಂಟಲು ಕೆರೆತ, ಕೆಮ್ಮು, ಚರ್ಮ ತುರಿಕೆ ಲಕ್ಷಣಗಳು ಕಂಡು ಬರುವ ಪ್ರಯಾಣಿಕರಿಗೆ ತಪಾಸಣೆ ತಪಾಸಣೆ ನಡೆಸಲಾಗುತ್ತದೆ.

ಇನ್ನು ಮಂಕಿಪಾಕ್ಸ್‌ ವಿಚಾರವಾಗಿ ನಾಳೆ ಉನ್ನತ ಮಟ್ಟದ ಸಭೆ ನಡೆಯಲಿದೆ. ಈ ಬಗ್ಗೆ ಮಾಧ್ಯಮದೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಮಂಕಿಪಾಕ್ಸ್ ಬಗ್ಗೆ ತೆಗೆದುಕೊಳ್ಳಬಹುದಾದ ಕ್ರಮಗಳ ಬಗ್ಗೆ ಆರೋಗ್ಯ ಸಚಿವರು ಹಾಗೂ ಇಲಾಖೆಯೊಂದಿಗೆ ನಾಳೆ ಎರಡು ಸಭೆಗಳನ್ನು ನಡೆಸುವುದಾಗಿ ತಿಳಿಸಿದರು.

- Advertisement -
spot_img

Latest News

error: Content is protected !!