Sunday, June 7, 2026
Homeತಾಜಾ ಸುದ್ದಿರಾಜ್ಯ ಸರ್ಕಾರದ ವಿರುದ್ಧ ಖಾಸಗಿ ಶಿಕ್ಷಣ ಸಂಸ್ಥೆಗಳಿಂದ ನಾಳೆ ಪ್ರತಿಭಟನೆ!..

ರಾಜ್ಯ ಸರ್ಕಾರದ ವಿರುದ್ಧ ಖಾಸಗಿ ಶಿಕ್ಷಣ ಸಂಸ್ಥೆಗಳಿಂದ ನಾಳೆ ಪ್ರತಿಭಟನೆ!..

- Advertisement -
- Advertisement -

ಬೆಂಗಳೂರು :ನಾಳೆ ವಿವಿಧ ಬೇಡಿಕೆ ಈಡೇರಿಕೆಗಾಗಿ ಆಗ್ರಹಿಸಿ ಖಾಸಗಿ ಶಿಕ್ಷಣ ಸಂಸ್ಥೆಗಳು ಪ್ರತಿಭಟನೆ ನಡೆಸಲು ನಿರ್ಧರಿಸಿವೆ.ಹಲವು ತಿಂಗಳ ನಂತರ ರಾಜ್ಯದಲ್ಲಿ ಶಾಲೆಗಳು ಆರಂಭವಾಗಿದ್ದು, ವಿದ್ಯಾರ್ಥಿಗಳು, ಪೋಷಕರಿಂದಲೂ ಉತ್ತಮ ಪ್ರತಿಕ್ರಿಯೆ ಬಂದಿದೆ.ಈ ನಡುವೆ ಪ್ರತಿಭಟನೆ ನಡೆಯುತ್ತಿರುವುದು ಗೊಂದಲ ಮೂಡಿಸಿದೆ.

ಪಠ್ಯಕ್ರಮ ಮತ್ತು ಪರೀಕ್ಷಾ ವೇಳಾಪಟ್ಟಿ ಬಿಡುಗಡೆ ಮಾಡಬೇಕು.ಆರ್ಥಿಕ ಸಂಕಷ್ಟದಲ್ಲಿರುವ ಖಾಸಗಿ ಶಾಳೆಗಳಿಗೆ ಇಎಂಐ ಕಟ್ಟಲು ಒಂದು ವರ್ಷದ ಕಾಲಾವಕಾಶ ನೀಡಬೇಕು. 1995 ರ ನಂತರ ಪ್ರಾರಂಭಿಸಿದ ಅನುದಾನ ರಹಿತ ಶಾಲೆಗಳನ್ನು ಅನುದಾನಕ್ಕೆ ಒಳಪಡಿಸಬೇಕು ಎಂಬ ಬೇಡಿಕೆಗಳನ್ನು ಪ್ರತಿಭಟನಾಕಾರರು ಹೊಂದಿದ್ದಾರೆ. ಖಾಸಗಿ ಶಿಕ್ಷಣ ಸಂಸ್ಥೆಗಳು ನಾಳೆ ನಗರದ ಮೌರ್ಯ ವೃತ್ತದಿಂದ ಸ್ವಾತಂತ್ರ್ಯ ಉದ್ಯಾನದವರೆಗೂ ಪ್ರತಿಭಟನಾ ರ್ಯಾಲಿ ನಡೆಸಲಿದ್ದಾರೆ. ಎಂದು ಖಾಸಗಿ ಶಿಕ್ಷಣ ಸಂಸ್ಥೆಗಳು ತಿಳಿಸಿವೆ.

- Advertisement -

Latest News

error: Content is protected !!