Friday, June 27, 2025
Homeಕರಾವಳಿಉಡುಪಿಹಿರಿಯ ಯಕ್ಷಗಾನ ಕಲಾವಿದ ತೋನ್ಸೆ ಜಯಂತ್‌ ಕುಮಾರ್‌ ನಿಧನ

ಹಿರಿಯ ಯಕ್ಷಗಾನ ಕಲಾವಿದ ತೋನ್ಸೆ ಜಯಂತ್‌ ಕುಮಾರ್‌ ನಿಧನ

spot_img
- Advertisement -
- Advertisement -

ಉಡುಪಿ: ಯಕ್ಷ  ಗುರು, ಭಾಗವತ, ವೇಷಧಾರಿ ತೋನ್ಸೆ ಜಯಂತ್‌ ಕುಮಾರ್‌ ಅವರು ಇಂದು ನಿಧನರಾಗಿದ್ದಾರೆ.

1946ರಲ್ಲಿ ತೋನ್ಸೆಯವರು ಚೇತನ ಪ್ರೌಢಶಾಲೆ, ಹಂಗಾರಕಟ್ಟೆಯಲ್ಲಿ ಕಛೇರಿ ಅಧೀಕ್ಷಕರಾಗಿ ನಿವೃತ್ತರಾಗಿದ್ದರು. ಆದರೆ ಯಕ್ಷಗಾನದಲ್ಲಿ ಸದಾ ಪ್ರವೃತ್ತರು. ಸಂಚಾರಿ ಯಕ್ಷಗಾನ ಭಂಡಾರವೆಂದೇ ಖ್ಯಾತರಾಗಿದ್ದ ತೋನ್ಸೆ ಕಾಂತಪ್ಪ ಮಾಸ್ತರರ ಸುಪುತ್ರರಾಗಿದ್ದ ಇವರಿಗೆ ತಂದೆಯೇ ಯಕ್ಷಗಾನ ಗುರು. ಆರಂಭದಲ್ಲಿ ಯಕ್ಷಗಾನ ವೇಷಧಾರಿಯಾಗಿ ಆಮೇಲೆ ಯಕ್ಷಗಾನ ಗುರುಗಳಾಗಿ ಈ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದರು. ಉಡುಪಿ ಶಾಸಕರ ನೇತೃತ್ವದ ಯಕ್ಷಶಿಕ್ಷಣ ಟಸ್ಟ್ ನಲ್ಲಿ ಆರಂಭದಿಂದಲೂ ಗುರುಗಳಾಗಿ ಅದರ ಯಶಸ್ಸಿಗೆ ಕಾರಣರಾಗಿದ್ದರು.ಅವರು ಯಕ್ಷಗಾನ ಅಕಾಡೆಮಿ ಪ್ರಶಸ್ತಿ, ಶ್ರೀರಾಮ ವಿಠಲ ಪ್ರಶಸ್ತಿ, ಯಕ್ಷಗಾನ ಕಲಾರಂಗ ಪ್ರಶಸ್ತಿ ಸೇರಿದಂತೆ ನೂರಾರು ಪ್ರಶಸ್ತಿಗೆ ಭಾಜನರಾಗಿದ್ದರು.

ಮೃತರು ಪತ್ನಿ ಮೂವರು ಪುತ್ರರನ್ನು ಅಗಲಿದ್ದಾರೆ ನಾಳೆ ಸಂತೆಕಟ್ಟೆ ಗೋಪಾಲಪುರದಲ್ಲಿರುವ ಮನೆಯಲ್ಲಿ ಬೆಳಿಗ್ಗೆ 9 ಗಂಟೆಯಿಂದ ಅಂತಿಮ ವಿಧಿವಿಧಾನಗಳನ್ನು ಪೂರೈಸಿ ಸಕಲ ಗೌರವಾರ್ಪಣೆಯೊಂದಿಗೆ ಬೀಡಿನ ಗುಡ್ಡೆ ರುದ್ರಭೂಮಿಯಲ್ಲಿ ಅಂತ್ಯಸಂಸ್ಕಾರವು ನೆರವೇರಲಿದೆ

- Advertisement -
spot_img

Latest News

error: Content is protected !!