Friday, June 5, 2026
Homeಕರಾವಳಿಬೆಳ್ತಂಗಡಿಯಲ್ಲಿ ಬಾಲಕಿಗೆ ಕಿರುಕುಳ ಯುವಕನ ಬಂಧನ

ಬೆಳ್ತಂಗಡಿಯಲ್ಲಿ ಬಾಲಕಿಗೆ ಕಿರುಕುಳ ಯುವಕನ ಬಂಧನ

- Advertisement -
- Advertisement -

ಬೆಳ್ತಂಗಡಿ : ಉರುವಾಲು ಗ್ರಾಮದ ಕುಪ್ಪೆಟ್ಟಿಯ ನೆಕ್ಕಿಲ್ ಎಂಬಲ್ಲಿಯ ಅಪ್ರಾಪ್ತ ಬಾಲಕಿಗೆ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಈ ಬಗ್ಗೆ ದೂರು ದಾಖಲಾದ ಹಿನ್ನೆಲೆಯಲ್ಲಿ ಪುಂಜಾಲಕಟ್ಟೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ನೆಕ್ಕಿಲ್ ನಿವಾಸಿ ಸಮದ್ ಬಂಧಿತ ಆರೋಪಿ.

ಉರುವಾಲು ಗ್ರಾಮದ ಕುಪ್ಪೆಟ್ಟಿಯ ನೆಕ್ಕಿಲ್ ಎಂಬಲ್ಲಿ ಬಾಡಿಗೆ ಮನೆಯಲ್ಲಿ ತನ್ನ ತಾಯಿ, ಅಜ್ಜಿ, ತಮ್ಮನ ಜೊತೆ ವಾಸ್ತವ್ಯವಿದ್ದ ಬಾಲಕಿಗೆ ಸಮದ್ ಕಿರುಕುಳ ನೀಡಿದ್ದಾನೆ ಎಂಬ ಆರೋಪದಲ್ಲಿ ಆತನನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!