- Advertisement -
- Advertisement -
ಮಂಗಳೂರು; ತಾಯಿಗೆ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ಮೂವರು ಪುತ್ರರನ್ನು ಬಂಧಿಸಲಾಗಿದೆ.
ಮುಲ್ಕಿ ಸಮೀಪದ ಕೆ ಎಸ್ ರಾವ್ ನಗರದ ಲಿಂಗಪ್ಪಯ್ಯ ಕಾಡು ಪ್ರದೇಶದ ಕೊರಂಟಬೆಟ್ಟು ಕಾಲೋನಿಯಲ್ಲಿ ಸುಮಿತ್ರ (44) ಎಂಬವರು ಆತ್ಮಹತ್ಯೆ ಮಾಡಿಕೊಂಡಿದ್ದರು. ಅವರ ಪುತ್ರರಾದ ಮಂಜುನಾಥ (25), ಪ್ರಹ್ಲಾದ ಯಾನೆ ಪ್ರಭು (19),ಸಂಜೀವ(22) ಗುರುವಾರ ರಾತ್ರಿ 11:30 ಗಂಟೆಗೆ ಮದ್ಯದ ನಶೆಯಲ್ಲಿ ಕ್ಷುಲ್ಲಕ ಕಾರಣಕ್ಕೆ ಮನೆಯಲ್ಲಿ ಜಗಳ ಮಾಡಿಕೊಂಡಿದ್ದಾರೆ. ಇದರಿಂದ ಮನನೊಂದ ಸುಮಿತ್ರ ಪಕ್ಕಾಸಿಗೆ ಸೀರೆಯಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಸ್ಥಳಕ್ಕೆ ಪಣಂಬೂರು ಎಸಿಪಿ, ಮುಲ್ಕಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಕೂಡಲೇ ಮೂವರು ಆರೋಪಿಗಳನ್ನು ಬಂಧಿಸಿದ ಪೊಲೀಸರು ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
- Advertisement -